pragati english medium school annual day function
ಮಕ್ಕಳನ್ನು ಶಾಲೆಗೆ ಕಳುಹಿಸಿದ ಮಾತ್ರಕ್ಕೆ ಹೆತ್ತವರ ಜವಬ್ದಾರಿ ಮುಗಿಯುವುದಿಲ್ಲ, ಮಕ್ಕಳಲ್ಲಿ ಸದಭಿರುಚಿಯ ಚಿಂತನೆಗಳನ್ನು ಅರಳಿಸುವ ನಿಟ್ಟಿನಲ್ಲಿ ಮಗುಸ್ನೇಹಿ ಮಾತಾವರಣವನ್ನು ಮಕ್ಕಳ ಸುತ್ತಮುತ್ತ ಕಟ್ಟಿಕೊಡಬೇಕು ಎಂದು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವ ಕರ್ಮ ಹೇಳಿದರು.
ಮಂಚಿ ಕುಕ್ಕಾಜೆಯ ಪ್ರಗತಿ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಂಭ್ರಮದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಥಮಿಕ ಹಾಗೂ ಪ್ರೌಢಹಂತದ ಶಿಕ್ಷಣ ಮಕ್ಕಳ ಸುಂದರ ಭವಿಷ್ಯಕ್ಕೆ ಭದ್ರಬುನಾದಿಯನ್ನು ಹಾಕಿಕೊಡುತ್ತದೆ, ಈ ಹಂತದಲ್ಲಿ ಮಕ್ಕಳು ಹಾದಿ ತಪ್ಪದಂತೆ ಇಡೀ ಸಮಾಜ ಎಚ್ಚರವಹಿಸಬೇಕು ಎಂದವರು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಸತೀಶ್ ಭಂಡಾರಿ ಬಾವಬೀಡು ರವರು ಮಾತನಾಡಿ, ಉತ್ತಮ ಗುಣಾತ್ಮಕ ಶಿಕ್ಷಣದ ಜೊತೆಗೆ ಗಮನೀಯ ಫಲಿತಾಂಶವನ್ನು ಗಳಿಸುತ್ತಿರುವ ಪ್ರಗತಿ ವಿದ್ಯಾಸಂಸ್ಥೆ, ಸಹಪಠ್ಯ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು.
ಜಿಲ್ಲಾ ವೈದ್ಯಾಧಿಕಾರಿ ಡಾ. ಮಹಮ್ಮದ್ ಇಕ್ಬಾಲ್, ಬಂಟ್ವಾಳ ಸಂಚಾರಿ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಯಲ್ಲಪ್ಪ, ಶಾಲಾ ಸಂಚಾಲಕರಾದ ಡಾ.ಸುಭೋದ್ ಭಂಡಾರಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೯೯.೫ ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ನಾಲ್ಕನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಶ್ರೇಯಾ ಳನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಶ್ವೇತ್ ಕಿರಣ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಮೋಹಿನಿ ಎನ್‌ಶೆಟ್ಟಿ ವರದಿ ಶಾಲಾ ಚಟುವಟಿಕೆಗಳ ವಾರ್ಷಿಕ ವರದಿಂi ವಾಚಿಸಿದರು. ಪ್ರೌಢಶಾಲಾ ಮುಖ್ಯ ಉಪಾಧ್ಯಾಯನಿಯಾದ ಮೋಹಿನಿ ಎನ್ ಶೆಟ್ಟಿ ಮಂಡಿಸಿದರು , ಸುಷ್ಮಾ ವಂದಿಸಿದರು. ಶಾಲಾ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಸಹಕರಿಸಿದರು, ಶೋಭಿತ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಮೊದಲು ಹಾಗೂ ಬಳಿಕ ನಡೆದ ಪುಟಾಣಿ ಮಕ್ಕಳ ಸಾಂಸ್ಕತಿಕ, ಮನರಂಜನೆ ಕಾರ್ಯಕ್ರಮವು ಪ್ರೇಕ್ಷಕರ ಮನಸೂರೆಗೊಂಡಿತು
Be the first to comment on "ಪ್ರಗತಿ ಶಾಲೆ ವಾರ್ಷಿಕೋತ್ಸವ"