ಸುಮಾರು 2.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆಯನ್ನು ಬುಧವಾರ ಬೆಳಗ್ಗೆ ಧಾರ್ಮಿಕ ವಿಧಿ ವಿಧಾನದೊಂದಿಗೆ ಬಿ.ಸಿ.ರೋಡಿನ ಆಶ್ರಮ ಶಾಲೆ ಮುಂಭಾಗ ಕಾದಿರಿಸಿದ ಜಮೀನಿನಲ್ಲಿ ನೆರವೇರಿಸಲಾಯಿತು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತೆಂಗಿನಕಾಯಿ ಒಡೆಯುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಾಹೀರಾತು
ಈ ಸಂದರ್ಭ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಪುರಸಭಾ ಸದಸ್ಯ ಬಿ.ಪ್ರವೀ:ಣ್, ಪ್ರಮುಖರಾದ ಪದ್ಮನಾಭ ನರಿಂಗಾನ, ಜನಾರ್ದನ ಚಂಡ್ತಿಮಾರ್, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ"