ಬಿ.ಸಿ.ರೋಡ್ ನಾರಾಯಣಗುರು ವೃತ್ತದಿಂದ ಪುಂಜಾಲಕಟ್ಟೆವರೆಗಿನ ರಸ್ತೆ ಅಭಿವೃದ್ಧಿಗೆ 120 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಶೀಘ್ರ ಆರಂಭಿಸಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಿ.ಸಿ.ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಇದರಲ್ಲಿ ಬಿ.ಸಿ.ರೋಡ್ – ಜಕ್ರಿಬೆಟ್ಟುವರೆಗಿನ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲಾಗುವುದು. ಜಕ್ರಿಬೆಟ್ಟುವಿನಿಂದ ಪುಂಜಾಲಕಟ್ಟೆವರೆಗಿನ ರಸ್ತೆ ಡಾಂಬರು ಹಾಕಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯ ಪ್ರವೀಣ್ ಬಿ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಬಿ.ಸಿ.ರೋಡ್ – ಪುಂಜಾಲಕಟ್ಟೆ ರಸ್ತೆಗೆ 120 ಕೋಟಿ ರೂ ಮಂಜೂರು: ರೈ"