ಬಂಟ್ವಾಳ

24ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಸುವರ್ಣ ಮಹೋತ್ಸವ ಆಚರಣೆ

www.bantwalnews.com

ಜಾಹೀರಾತು

ಕೇಂದ್ರದ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಅವರು ಡಿಸೆಂಬರ್ 24ರಂದು ಭಾನುವಾರ ನಡೆಯುವ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸುವರ್ಣ ಮಹೋತ್ಸವ ಆಚರಣಾ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶ್ರೀ ಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಆಶೀರ್ವಚನ ನೀಡುವರು ಎಂದು ಬಿಲ್ಲವ ಸಮಾಜದ ಮುಖಂಡ ಹಾಗೂ ಸಂಘದ ಪೂರ್ವಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಹೇಳಿದ್ದಾರೆ.

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಮಾಜ ಸೇವಾಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ವಹಿಸುವರು ಎಂದರು. ಈ ಸಂದರ್ಭ ಪೂರ್ವಾಧ್ಯಕ್ಷರ ಸನ್ಮಾನ, ಸ್ಮರಣ ಸಂಚಿಕೆ ಬಿಡುಗಡೆ ಸಹಿತ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಬೆಳಗ್ಗೆ 5ರಿಂದ ವೈದಿಕ ಕಾರ್ಯಕ್ರಮ, 11 ಗಂಟೆಗೆ ಮಹಾಪೂಜೆ ಪ್ರಸಾದ ವಿತರಣೆ 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಡಿ.22ರಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಶುಕ್ರವಾರ ಬೆಳಗ್ಗೆಯಿಂದಲೇ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಶನಿವಾರ ಸತ್ಯನಾರಾಯಣ ಪೂಜೆ, ಗಣಪತಿ ಹೋಮ ಬೆಳಗ್ಗೆ 6ರಿಂದ ನಡೆಯಲಿದೆ. 24ರಂದು ಬೆಳಗ್ಗೆ 5 ಗಂಟೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಹರಿಕೃಷ್ಣ ಬಂಟ್ವಾಳ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್, ಲೆಕ್ಕಪರಿಶೋಧಕ ಸತೀಶ್ ಬಿ ಉಪಸ್ಥಿತರಿದ್ದರು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

20 hours ago