ಬಂಟ್ವಾಳ

ದುಷ್ಕರ್ಮಿಗಳ ಬಂಧನಕ್ಕೆ ಸಿಎಫ್‌ಐ ಒತ್ತಾಯ

ಬಿಜಾಪುರದ ಜಯಪುರದಲ್ಲಿ ದಲಿತ ಸಮುದಾಯದ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು, ಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ಘಟಕದ ವತಿಯಿಂದ ಶುಕ್ರವಾರ ಸಂಜೆ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಧರಣಿ ನಡೆಯಿತು.

ಜಾಹೀರಾತು

ಸಿಎಫ್‌ಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಮಾತನಾಡಿ, ಈಗಾಗಲೇ ದೇಶದಾದ್ಯಂತ ಹಲವಾರು ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ವಿದ್ಯಾರ್ಥಿನಿ ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲದೆ ವಿದ್ಯಾರ್ಥಿಗಳು ಮಾದಕ ವ್ಯಸಗಳಿಗೆ ತುತ್ತಾಗುತ್ತಿದ್ದು, ಸರಕಾರ ಇದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದರು.

ಬಿಜಾಪುರದ ಜಯಪುರದಲ್ಲಿ ದಲಿತ ಸಮುದಾಯದ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವನ್ನು ಎಸಗಿ, ಕೊಲೆ ಮಾಡಿರುವುದು ನೀಚ ಕೃತ್ಯವಾಗಿದೆ. ಸರಕಾರ ಈ ಪ್ರಕರಣನ್ನು ಗಂಭೀರವಾಗಿ ಪರಿಗಣಿಸಿ, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನೆ ನಡೆಯದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಎಫ್‌ಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಪಿ.ಜೆ., ಬಂಟ್ವಾಳ ವಲಯ ಅಧ್ಯಕ್ಷ ನಬೀಲ್, ಫಹದ್ ಉಪಸ್ಥಿತರಿದ್ದರು. ನಾಸಿರ್ ಸ್ವಾಗತಿಸಿ, ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts