ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ಕನ್ನಡ ವಿಭಾಗ, ಮಂಗಳೂರು ವಿಶ್ವ ವಿದ್ಯಾನಿಲಯ ಕನ್ನಡ ಅಧ್ಯಾಪಕರ ಸಂಘ (ವಿಕಾಸ) ಮತ್ತು ಕಾಲೇಜಿನ ಐಕ್ಯೂಎಸಿ ಘಟಕ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ಕೌನ್ಸಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ ಹೈದ್ರಾಬಾದ್ ಪ್ರಾಯೋಜಿತ ಪ್ರಾಚೀನ ಕನ್ನಡ ಸಾಹಿತ್ಯದ ನೆಲೆಯಲ್ಲಿ ಕರ್ನಾಟಕ ಇತಿಹಾಸದ ಮರು ವ್ಯಾಖ್ಯಾನ ಎಂಬ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಜನವರಿ 3, 2018 ರಂದು ಕಾಲೇಜಿನಲ್ಲಿ ನಡೆಯಲಿದೆ.
ಗೋವಾ ವಿಶ್ವವಿದ್ಯಾನಿಲಯದ ಇಂಗ್ಲೀಷ್ ಪ್ರಾಧ್ಯಾಪಕರಾದ ಡಾ| ಶ್ರೀಪಾದ ಭಟ್ ವಿಚಾರ ಸಂಕಿರಣವನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕರಾದ ಡಾ| ನಾಗಪ್ಪ ಗೌಡ ಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಪುತ್ತೂರಿನ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ| ಶ್ರೀಧರ್ ಹೆಚ್.ಜಿ, ಖ್ಯಾತ ಇತಿಹಾಸ ಸಂಶೋಧಕರಾದ ಡಾ| ಪುಂಡಿಕಾ ಗಣಪಯ್ಯಭಟ್, ಉಜಿರೆ ಎಸ್. ಡಿ. ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಸುಭಾಷ್ ರಾವ್ ಬೋಳೂರು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ರಾಜ್ಯ-ಹೊರ ರಾಜ್ಯಗಳ ಸುಮಾರು 25 ಮಂದಿ ಸಂಶೋಧಕರು ತಮ್ಮ ಅಮೂಲ್ಯ ಪ್ರಬಂಧ ಮಂಡಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.