ವಿಷಯವೊಂದನ್ನು ಅಧ್ಯಯನ ಮಾಡುವ ಸಂದರ್ಭ, ನಾವು ಆನಂದವನ್ನು ಅನುಭವಿಸಬೇಕು. ಅದೇ ರೀತಿ ಸ್ಪರ್ಧೆಗಳಲ್ಲಿ ತೊಡಗಿರುವವರು ಶ್ರದ್ಧೆ, ಆನಂದದಿಂದ ತೊಡಗಿಸಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಹೇಳಿದರು.
ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಜಂಟಿಯಾಗಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಅಂತರ್-ಕಾಲೇಜು ಬಾಲ್ ಬಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟಿಸಿ ಮಾತನಾಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ. ಕೆ ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಟೂರ್ನಮೆಂಟ್ ಸಂಯೋಜಕ ಹಾಗೂ ಕಾಲೇಜಿನ ಶಾರೀರಿಕ ನಿರ್ದೇಶಕ ಸುಂದರ್ ವಂದಿಸಿದರು. ಉಪನ್ಯಾಸಕ ರಮಾನಂದ ಭಟ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಸ್ವಾತಿ ಎನ್ ಮತು ಧನ್ಯ ಪ್ರಾರ್ಥಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…