ದ್ವಿಚಕ್ರವಾಹನ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲುವಿನಲ್ಲಿ ಮಂಗಳವಾರ ನಡೆದಿದೆ. ಬೋಳಂತೂರು ನಿವಾಸಿ ಸಂಜೀವ ಎಂಬವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ ಕಡೆಯಿಂದ ಬರುತ್ತಿದ್ದ ನೊಂದಾವಣಿಯಾಗದ ಹೊಸ ದ್ವಿಚಕ್ರವಾಹನ ಹಾಗೂ ಸರ್ಕಾರಿ ಬಸ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿದೆ. ದ್ವಿಚಕ್ರವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಸ್-ಸ್ಕೂಟರ್ ಡಿಕ್ಕಿ: ಸವಾರ ಆಸ್ಪತ್ರೆಗೆ"