ದ್ವಿಚಕ್ರವಾಹನ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲುವಿನಲ್ಲಿ ಮಂಗಳವಾರ ನಡೆದಿದೆ. ಬೋಳಂತೂರು ನಿವಾಸಿ ಸಂಜೀವ ಎಂಬವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ ಕಡೆಯಿಂದ ಬರುತ್ತಿದ್ದ ನೊಂದಾವಣಿಯಾಗದ ಹೊಸ ದ್ವಿಚಕ್ರವಾಹನ ಹಾಗೂ ಸರ್ಕಾರಿ ಬಸ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿದೆ. ದ್ವಿಚಕ್ರವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…