ಮಂಗಳವಾರ ಇಳಿಸಂಜೆ ಕಲ್ಲಡ್ಕದಲ್ಲಿ ನಡೆದ ಕೊಲೆಯತ್ನ ಘಟನೆ ಸಂಬಂಧಿಸಿ ಹಲವರ ವಿಚಾರಣೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ. ಆದರೆ ಘಟನೆ ಬಳಿಕ ಬಸ್ಸಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಜಾಹೀರಾತು
ಬುಧವಾರ ಕಲ್ಲಡ್ಕ ಸಹಜಸ್ಥಿತಿಗೆ ಮರಳಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ವ್ಯಾಪಾರ, ವಹಿವಾಟುಗಳು ನಿರಾತಂಕವಾಗಿ ಸಾಗಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹಗಲು ರಾತ್ರಿ ಕಾವಲು ಕಾಯುತ್ತಿದ್ದು, ಖುದ್ದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಂಗಳವಾರ ವೀರಕಂಭ ನಿವಾಸಿ ಕೇಶವ ಎಂಬಾತನ ಕೊಲೆಯತ್ನಕ್ಕೆ ಸಂಬಂಧಿಸಿ ಆರೋಪಿಗಳಿಗೆ ತೀವ್ರ ಶೋಧ ನಡೆಯುತ್ತಿದೆ. ಈ ಸಂಬಂಧ ಹಲವರ ವಿಚಾರಣೆಯೂ ನಡೆಯುತ್ತಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಹಜ ಸ್ಥಿತಿಗೆ ಮರಳಿದ ಕಲ್ಲಡ್ಕ"
Be the first to comment on "ಸಹಜ ಸ್ಥಿತಿಗೆ ಮರಳಿದ ಕಲ್ಲಡ್ಕ"