ಬಂಟ್ವಾಳ ತಾಲೂಕು ಇರಾ ಕಲ್ಲಾಡಿ ಮಲೆಯಾಳಿ ಬಿಲ್ಲವ ಸೇವಾ ಸಂಘ, ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಯ ವಾರ್ಷಿಕೋತ್ಸವ ಸಮಾರಂಭ ಡಿ. 31ರಂದು ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಸಾರ್ವಜನಿಕ ಶ್ರೀ ಸತ್ಯಗಣಪತಿ ಪೂಜೆ, ಮಧ್ಯಾಹ್ನ ಅನ್ನಪ್ರಸಾದ ನಡೆದು ಸಂಜೆ 6 ಗಂಟೆಗೆ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ತಾ.ಪಂ. ಅಧ್ಯಕ್ಷ ಚಂದ್ರಹಾಸ್ ಆರ್ ಕರ್ಕೇರ, ಜಿ.ಪಂ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ, ಇರಾ ಗ್ರಾ.ಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಪ್ರಮುಖರಾದ ಮಾಧವ ಜಪ್ಪುಪಟ್ನ, ಚಂದ್ರಶೇಖರ ಉಚ್ಚಿಲ್, ಹರಿಕೃಷ್ಣ ಬಂಟ್ವಾಳ್, ಎಚ್.ತನಿಯಪ್ಪ ಮುಂತಾದವರು ಭಾಗವಹಿಸಲಿದ್ದಾರೆ. ಪ್ರಶಾಂತ್ ಚೌಕದಪಾಲು ಹಾಗೂ ಶೌರ್ಯ ಪ್ರಶಸ್ತಿ ಪುರಸ್ಕೃತ ವೈಶಾಖ್ ಕೂಡೂರು ಅವರಿಗೆ ಸನ್ಮಾನ ನಡೆಯಲಿದೆ. ಬಳಿಕ ಮಲೆಯಾಳಿ ಬಿಲ್ಲವ ಸೇವಾ ಸಂಘ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಬದುಕೊಂಜಿ ನಾಟಕ’ ಪ್ರದರ್ಶನಗೊಳ್ಳಲಿದೆ ಎಂದು ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ವೈ.ಬಿ ಹಾಗೂ ಮಹಿಳಾ ವೇದಿಕೆ ಅಧ್ಯಕ್ಷೆ ಸ್ಮಿತಾ ಉಮೇಶ್ ಮೇಗಿನಬೈಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Be the first to comment on "31ರಂದು ಇರಾ ಮಲೆಯಾಳಿ ಬಿಲ್ಲವ ಸೇವಾ ಸಂಘದ ವಾರ್ಷಿಕೋತ್ಸವ"