ಬಿ.ಸಿ.ರೋಡಿನಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ನೂತನ ಕಚೇರಿಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾನುವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸಮಕ್ಷಮ ಲೋಕಾರ್ಪಣೆಗೊಳಿಸಿದರು.
ಬಳಿಕ ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.
ಕಾಂಗ್ರೆಸ್ ಪಕ್ಷ ಜಾತ್ಯಾತೀತ ಸಿದ್ಧಾಂತಗಳಿಂದ ಬೆಳೆದುಬಂದ ಪಕ್ಷ. ಯಾವುದೇ ಕಾರಣಕ್ಕೂ ಮತೀಯವಾದ ಚಟುವಟಿಕೆಗಳಲ್ಲಿ ಕಾಂಗ್ರೆಸ್ ತೊಡಗಿಸಿಕೊಂಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಯು.ಬಿ. ವೆಂಕಟೇಶ್, ದ.ಕ.ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಸವಿತಾ ರಮೇಶ್, ಎಂ.ಎಲ್ .ಮೂರ್ತಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಮಮತಾ ಡಿ.ಎಸ್. ಗಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಪಕ್ಷ ಪ್ರಮುಖರಾದ ಮಲ್ಲಿಕಾ ಶೆಟ್ಟಿ, ಜಯಂತಿ, ಮಾಯಿಲಪ್ಪ ಸಾಲ್ಯಾನ್, ಪ್ರಶಾಂತ್ ಕುಲಾಲ್, ಚಂದ್ರಹಾಸ ಕರ್ಕೇರ, ಪಿ. ರಾಮಕೃಷ್ಣ ಆಳ್ವ, ಮಹಮ್ಮದ್ ನಂದರಬೆಟ್ಟು, ವೆಂಕಪ್ಪ ಪೂಜಾರಿ, ಬಿ. ಕೆ.ಇದಿನಬ್ಬ, ಸದಾಶಿವ ಬಂಗೇರ, ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಐಡಾ ಸುರೇಶ್, ಡಿ.ಕೆ.ಶಾಹುಲ್ ಹಮೀದ್, ವಾಸು ಪೂಜಾರಿ, ಮಲ್ಲಿಕಾ ಪಕ್ಕಳ, ರಾಜಶೇಖರ ನಾಯಕ್, ಅಲ್ಬರ್ಟ್ ಮಿನೇಜಸ್, ವಲಯ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.