ಹಿಂದು ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಮೇಲಿನ ಗಡೀಪಾರು ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಒಂದು ವಾರಗಳ ಕಾಲದ ನಿರಂತರ ಪ್ರತಿಭಟನೆಗೆ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಚಾಲನೆ ನೀಡಲಾಯಿತು.
ಈ ಸಂದರ್ಭ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಪ್ರಾಂತ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ, ರತ್ನಾಕರ ಶೆಟ್ಟಿ ಮೇಲೆ ಗುರುತರವಾದ ಆರೋಪವಿಲ್ಲದಿದ್ದರೂ ಆಡಳಿತ ಪೊಲೀಸ್ ಇಲಾಖೆ ಗಡೀಪಾರು ಆದೇಶ ಹೊರಡಿಸಿರುವುದು ಖಂಡನೀಯವಾಗಿದೆ ಎಂದರು.
ಕಳೆದ ನಾಲ್ಕೂವರೆ ವರ್ಷದಲ್ಲಿ ಸರಕಾರ ಪೊಲೀಸ್ ಇಲಾಖೆಯನ್ನು ಬಳಕೆ ಮಾಡಿಕೊಂಡು ಹಿಂದು ಸಂಘಟನೆಯ ಮುಖಂಡರು, ಕಾರ್ಯಕರ್ತರ ಮೇಲೆಯೇ ಸುಳ್ಳು ಕೇಸು ಹಾಕುವ ಮೂಲಕ ನಮ್ಮ ಮೂಲಭೂತ ಹಕ್ಕು ಕಸಿಯುವ ಮತ್ತು ಹೋರಾಟವನ್ನು ಹತ್ತಿಕ್ಕುವ ಕಾರ್ಯನಡೆಸುತ್ತಿದೆ ಎಂದರು. ಮುಖಂಡರಾದ ಉಲ್ಲಾಸ್, ರವಿರಾಜ ಶೆಟ್ಟಿ ಕಡಬ, ವಿಹಿಂಪ ಮುಖಂಡ ಅಶೋಕ ಶೆಟ್ಟಿ ಸರಪಾಡಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪ್ರಮುಖರಾದ ರವಿರಾಜ್ ಬಿ.ಸಿ.ರೋಡ್, ಚಂದ್ರಕುಮಾರ್, ಅರುಣ್ ಕುಮಾರ್ ಶೆಟ್ಟಿ, ಪ್ರಶಾಂತ್ ಕೆಂಪುಗುಡ್ಡೆ ಮೊದಲಾದವರಿದ್ದರು. ಬಳಿಕ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)