ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಸನಿಹ ಇರುವ ಪುರಸಭಾ ಕಟ್ಟಡದ ಮೇಲಂತಸ್ತಿನಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಕಚೇರಿಗೆ ಸೋಮವಾರ ಶಿಲಾನ್ಯಾಸ ನೆರವೇರಿಸಲಾಯಿತು.
ಜಾಹೀರಾತು
ಸುಮಾರು 25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಕಚೇರಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಶಿಲಾನ್ಯಾಸ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ, ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಬಿ.ಮೋಹನ್, ಗಂಗಾಧರ, ಗೇರು ನಿಗಮದ ಅಧ್ಯಕ್ಷ ಬಿ. ಎಚ್.ಖಾದರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ, ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಸಹಿತ ಬುಡಾ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್: ನಗರ ಯೋಜನಾ ಪ್ರಾಧಿಕಾರ ಕಚೇರಿ ಕಾಮಗಾರಿ ಶಿಲಾನ್ಯಾಸ"