ಬಂಟ್ವಾಳ

ಬಿ.ಸಿ.ರೋಡ್: ನಗರ ಯೋಜನಾ ಪ್ರಾಧಿಕಾರ ಕಚೇರಿ ಕಾಮಗಾರಿ ಶಿಲಾನ್ಯಾಸ

ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಸನಿಹ ಇರುವ ಪುರಸಭಾ ಕಟ್ಟಡದ ಮೇಲಂತಸ್ತಿನಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಕಚೇರಿಗೆ ಸೋಮವಾರ ಶಿಲಾನ್ಯಾಸ ನೆರವೇರಿಸಲಾಯಿತು.

ಜಾಹೀರಾತು

ಸುಮಾರು 25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಕಚೇರಿಗೆ  ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಶಿಲಾನ್ಯಾಸ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ,   ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಬಿ.ಮೋಹನ್, ಗಂಗಾಧರ, ಗೇರು ನಿಗಮದ ಅಧ್ಯಕ್ಷ ಬಿ. ಎಚ್.ಖಾದರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ, ಇಂಜಿನಿಯರ್ ಡೊಮೆನಿಕ್  ಡಿಮೆಲ್ಲೊ ಸಹಿತ ಬುಡಾ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts