ಶ್ರೀ ಅಣ್ಣಪ್ಪ ಪಂಜುರ್ಲಿ ಮೂಲ ಸ್ಥಾನ ಮಂಜನಗುಡ್ಡೆ ಕುರ್ಮಾನ್ ಗೌರವಾಧ್ಯಕ್ಷರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಅಧ್ಯಕ್ಷರಾಗಿ ಕಾ. ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಬಿ.ಕೆ.ಅಣ್ಣುಪೂಜಾರಿ, ಉತ್ಸವ ಸಮಿತಿ ಅಧ್ಯಕ್ಷರಾಗಿ ಮೋಹನ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ರೂಪೇಶ್ ಕುರ್ಮಾನ್ ಮಾತೃ ಸಮಿತಿ ಅಧ್ಯಕ್ಷರಾಗಿ ಸುಜಾತ ಬೊಲ್ಪೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಗಾಯತ್ರಿ ಪ್ರಕಾಶ್ ಮತ್ತು ಉಮಾವತಿ ಇವರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು.
ಕಲ್ಲಡ್ಕ ಡಾ| ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.ಸಮಾಜದಿಂದ ಬಂದಿರುವ ಕಾಣಿಕೆಯನ್ನು ದೇವಸ್ಥಾನದ ಮೂಲಕ ಸಮಾಜ ಕಲ್ಯಾಣಕ್ಕಾಗಿ ವಿನಿಯೋಗಿಸುವಂತೆ ಡಾ. ಭಟ್ ಈ ಸಂದರ್ಭ ಕರೆ ನೀಡಿದರು. ಬಿಜೆಪಿ ಮುಖಂಡರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯೆ ಲಕ್ಮೀ ಗೋಪಾಲಾಚಾರ್ಯ, ಪ್ರಮುಖರಾದ ಚೆನ್ನಪ್ಪ ಆರ್. ಕೋಟ್ಯಾನ್, ದಿನೇಶ್ ಅಮ್ಟೂರು,, ಬಿ.ಕೆ ಅಣ್ಣು ಪೂಜಾರಿ, ರಾಮಕೃಷ್ಣ ಪುದುವಾಳ್, ಬ್ರಿಜೇಶ್ ಬಾಳ್ತಿಲ ಬೀಡು, ಗ್ರಾ.ಪಂ.ಅಧ್ಯಕ್ಷ ವಿಠಲ ನಾಯ್ಕ, ಸದಸ್ಯರಾದ ವೆಂಕಟರಾಯ ಪ್ರಭು ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…