ಕಳೆದ ಮಂಗಳವಾರ ಇಳಿಸಂಜೆ ಕಲ್ಲಡ್ಕದಲ್ಲಿ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಲಡ್ಕ ಮೂಲದ ಮಂಗಳೂರು ನಿವಾಸಿ ಮೊಹಮ್ಮದ್ ಇಕ್ಬಾಲ್ (47), ಆತನ ಪುತ್ರ ನಿಜಾಮ್(21), ಮತ್ತು ಪಾಣೆಮಂಗಳೂರು ಆಲಡ್ಕದ ಮೊಹಮ್ಮದ್ ಶರೀಫ್(22) ಬಂಧಿತರು ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಚನ್ನ ಫಾರೂಕ್ ಸಹಿತ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಶೋಧ ಕಾರ್ಯ ನಡೆದಿದೆ.
ಡಿ.26ರಂದು ರಾತ್ರಿ ವೀರಕಂಭ ನಿವಾಸಿ ಕೇಶವ ಕಲ್ಲಡ್ಕದ ಅಂಗಡಿಯೊಂದರ ಬಳಿ ನಿಂತಿದ್ದ ಸಂದರ್ಭ, ಆರೋಪಿಗಳು ಏಕಾಏಕಿ ದಾಳಿ ನಡೆಸಿ, ಇರಿದು ಪರಾರಿಯಾಗಿದ್ದರು. ಘಟನೆ ಬಳಿಕ ಬಿಗುವಿನ ಪರಿಸ್ಥಿತಿ ನಿರ್ಮಾಣವಾಯಿತಾದರೂ ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ವೃತ್ತನಿರೀಕ್ಷಕ ಪ್ರಕಾಶ್, ಬಂಟ್ವಾಳ ಎರಡೂ ಠಾಣೆಗಳಾದ ಎಸ್.ಐ ಚಂದ್ರಶೇಖರ್, ಪ್ರಸನ್ನ ನೇತೃತ್ವದಲ್ಲಿ ಪೊಲೀಸರು ಕಾರ್ಯೋನ್ಮುಖರಾಗಿ, ಪರಿಸ್ಥಿತಿ ಮತ್ತಷ್ಟು ಹದಗೆಡುವುದನ್ನು ತಪ್ಪಿಸಿದರು. ಗಾಯಾಳುವನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯ ಬೆನ್ನಲ್ಲೇ ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಇದೀಗ ಬಂಟ್ವಾಳ ನಗರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಬುಧವಾರ ಸಂಜೆ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಸಂದರ್ಭ ಮೂರು ದಿನ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…