ಬಿ.ಸಿ.ರೋಡಿನ ಪಾಣೆಮಂಗಳೂರು ಸಮೀಪ ಹಳೇ ಟೋಲ್ ಗೇಟ್ ನ ಮುಂದೆ ನೆಹರೂನಗರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಹಳೇ ಟೋಲ್ ಗೇಟ್ ನಿಂದ ಪಾಣೆಮಂಗಳೂರಿಗೆ ಸಾಗುವ ಮಾರ್ಗದ ತಿರುವು ಪ್ರದೇಶದ ಬಳಿ ಸಜೀಪನಡು ಗ್ರಾಮದ ಮದ್ಯಲಚ್ಚಿಲ್ ನಿವಾಸಿ ಅಬ್ದುಲ್ ಲತೀಫ್ ಎಂಬವರ ಪುತ್ರ ಮಹಮ್ಮದ್ ಹರ್ಷಿದ್ (18) ಮತ್ತು ಬಸ್ತಿಗುಡ್ಡೆ ನಿವಾಸಿ ಮುಹಮ್ಮದ್ ಅಝೀಝ್ ಎಂವರ ಪುತ್ರ ಅಝಾಝ್ ಯಾನೆ ಅದ್ದ (20) ಸಾಗುತ್ತಿದ್ದ ಮಾಸ್ಟರೋ ಸ್ಕೂಟರ್ ಮತ್ತು ಮಂಗಳೂರು-ಪುತ್ತೂರು ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕೂಡಲೇ ಗಂಭೀರ ಗಾಯಗೊಂಡ ಇಬ್ಬರನ್ನೂ ಸ್ಥಳೀಯರ ನೆರವಿನಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)