ಬಂಟ್ವಾಳ

ರಾಷ್ಟ್ರಮಟ್ಟದ ಸಾಧಕ ವಿದ್ಯಾರ್ಥಿಗಳಿಗೆ ಮೆರವಣಿಗೆ ಮೂಲಕ ಸ್ವಾಗತ

www.bantwalnews.com

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಕಲೋತ್ಸವ ಸ್ಪರ್ಧೆಯ ರಂಗಭೂಮಿ ವಿಭಾಗದಲ್ಲಿ ಕಿಷ್ಕಿಂದ ಕೌತುಕ ಯಕ್ಷನಾಟಕ ಪ್ರದರ್ಶಿಸಿ ಪ್ರಥಮ ಬಹುಮಾನ ಗಳಿಸಿದ ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ತೆರೆದ ವಾಹನ ಮೂಲಕ ಮೆರವಣಿಗೆ ಮಾಡಿ ಸ್ವಾಗತಿಸಲಾಯಿತು.

ಮೊಗರ್ನಾಡು ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ ವಠಾರದಲ್ಲಿ ವಿಜೇತ ತಂಡಕ್ಕೆ ಆರತಿ ಬೆಳಗಿ, ತಿಲಕವಿಟ್ಟು ಹೂಹಾರ ಹಾಕಿ ಸ್ವಾಗತಿಸಲಾಯಿತು. ನಂತರ ತೆರೆದ ವಾಹನದಲ್ಲಿ ಗೊಂಬೆ ಕುಣಿತ, ವಾದ್ಯದೊಂದಿಗೆ ಶಾಲೆಗೆ ಕರೆತರಲಾಯಿತು. ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿತಂದ ವಿದ್ಯಾರ್ಥಿಗಳನ್ನು ಮಾರ್ಗ ಮಧ್ಯೆ ಗ್ರಾಮಸ್ಥರು ಹಾರ ಹಾಕಿ ಅಭಿನಂದಿಸಿದರು.

ವಿದ್ಯಾರ್ಥಿಗಳಾದ ಜಯಗೋವಿಂದ, ಧನುಷ್, ಭರತ್, ನವಿತ, ಲಿಖಿತಾ, ಕಾವ್ಯಶ್ರೀ, ನಯನ, ಪಾವನ, ಪ್ರಿಯಾಂಕ ಮತ್ತು ಚಂದ್ರಿಕಾ ಅಭಿನಯಿಸಿದ ಯಕ್ಷರೂಪಕವನ್ನು ಪ್ರದರ್ಶಿಸಲಾಗಿತ್ತು. ಮುಖ್ಯೋಪಾಧ್ಯಾಯ ಕಮಲಾಕ್ಷ ಕಲ್ಲಡ್ಕ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಪ್ಪ ಕೆ. ಜಾಲ್ಸೂರು ಮಾರ್ಗದರ್ಶನದಲ್ಲಿ ನಾಟಕ ಪ್ರದರ್ಶನಗೊಂಡಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಕೆ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ಗಾಯತ್ರಿ ರವೀಂದ್ರ ಸಪಲ್ಯ, ನರಿಕೊಂಬು ಪಂಚಾಯತ್ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ಹಾಗೂ ಸದಸ್ಯರು, ವಿದ್ಯಾಂಗ ಇಲಾಖೆ ಉಪನಿರ್ದೇಶಕರಾದ ವೈ.ಶಿವರಾಮಯ್ಯ, ಬಿ.ಆರ್.ಪಿ ನಾರಾಯಣ ಗೌಡ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಮತ್ತು ಸದಸ್ಯರು, ತಾಲೂಕು ಪಂಚಯತ್ ಮಾಜಿ ಸದಸ್ಯರಾದ ಆನಂದ ಎ ಶಂಭೂರು, ಮೊಗರ್ನಾಡು ದೇವಳದ ಮೊಕ್ತೇಸರ ಆದ ವೇದಮೂರ್ತಿ ಜನಾರ್ಧನ ಭಟ್, ಉದ್ಯಮಿ ಪದ್ಮನಾಭ ಮಯ್ಯ, ಪತ್ರಕರ್ತ ರಾಜಾ ಬಂಟ್ವಾಳ, ಯುವ ಸಂಗಮ ಯುವಕ ಮಂಡಲ, ಸಾರ್ವಜನಿಕ ಗಣೇಶೋತ್ಸವ ಸಮಿತಿ, ದುರ್ಗಾಪರಮೇಶ್ವರಿ ಮಹಿಳಾ ಮಂಡಲ, ಶಂಭೂರು ಮೂರ್ತೆದಾರರ ಸಹಕಾರ ಸಂಘ, ಸಮಾಜ ಸೇವಾ ದಳ ಶೇಡಿಗುರಿ, ಅಯ್ಯಪ್ಪ ಭಕ್ತ ವೃಂದ ಶೇಡಿಗುರಿ, ಇದರ ಪದಾಧಿಕಾರಿಗಳು ಸದಸ್ಯರು ಹಾಗೂ ಊರವರು, ಪೋಷಕರು ಉಪಸ್ಥಿತರಿದ್ದರು. ಪ್ರಕಾಶ್ ಸ್ವಾಗತಿಸಿ, ಭಾರತಿ ವಂದಿಸಿದರು. ಸದಾಶಿವ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts