ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು, ಅರಳ ನಿವಾಸಿ ಮಾವಂತೂರು ದೇವಪ್ಪ ಶೆಟ್ಟಿ (70) ಮಂಗಳೂರಿನ ಆರ್.ಟಿ.ಒ. ಕಚೇರಿ ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಜಾಹೀರಾತು
ಇವರು ರಸ್ತೆ ದಾಟಲು ನಿಂತಿದ್ದ ವೇಳೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.
ಬಂಟ್ವಾಳ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದ ಅವರು ಲಯನ್ಸ್ ಪ್ರಾಂತ ಸಂಯೋಜಕರಾಗಿದ್ದರು. ಲಯನ್ಸ್ ಸೇವಾ ಸಂಸ್ಥೆಯಲ್ಲಿ ತನ್ನ ಸಮಾಜಸೇವಾ ಕಾರ್ಯಗಳಿಂದ ಮನ್ನಣೆ ಗಳಿಸಿದ್ದರು. ಸ್ಥಳೀಯ ಶ್ರೀ ಶಾರದೋತ್ದವ ಸಮಿತಿ ಗೌರವಾಧ್ಯಕ್ಷರಾಗಿದ್ದ ಅವರು ಶ್ರೀ ಬಲವಂಡಿ ಪಿಲಿಚಾಮುಂಡಿ ದೈವಸ್ಥಾನದ ಧರ್ಮದರ್ಶಿಯೂ ಆಗಿದ್ದಾರೆ. ಇವರ ಅಕಾಲಿಕ ಸಾವಿಗೆ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಾಮಾಜಿಕ ಮುಂದಾಳು, ಉದ್ಯಮಿ ಮಾವಂತೂರು ದೇವಪ್ಪ ಶೆಟ್ಟಿ ಅಪಘಾತದಲ್ಲಿ ಮೃತ"
Be the first to comment on "ಸಾಮಾಜಿಕ ಮುಂದಾಳು, ಉದ್ಯಮಿ ಮಾವಂತೂರು ದೇವಪ್ಪ ಶೆಟ್ಟಿ ಅಪಘಾತದಲ್ಲಿ ಮೃತ"