ರೋಟರಿ ಕ್ಲಬ್ ಬಂಟ್ವಾಳ ಟೌನ್ , ಜೇಸೀ ಐ ಜೋಡುಮಾರ್ಗ ನೇತ್ರಾವತಿ ಹಾಗೂ ಇಂಟರಾಕ್ಟ್ ಕ್ಲಬ್ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ವತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಧ್ಯಯನ ತಂತ್ರ ಗಳು ಹಾಗೂ ಪರೀಕ್ಷಾ ತಯಾರಿ ಕಾರ್ಯಾಗಾರ ನಡೆಯಿತು.
ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಪ್ರಹ್ಲಾದ ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ವಿಧ್ಯಾರ್ಥಿಗಳು ತರಬೇತುದಾರರು ಮಾರ್ಗದರ್ಶನ ನೀಡಿದಂತೆ ಏಕಾಗ್ರತೆಯಿಂದ ಅಧ್ಯಯನ ಮಾಡಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಕಿವಿಮಾತು ಹೇಳಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಶಾಲಾ ಆಡಳಿತಾಧಿಕಾರಿ ಶ್ರೀಧರ್ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಕಾರ್ಯದರ್ಶಿ ಉಮೇಶ್ ನಿರ್ಮಲ್, ಸದಸ್ಯರಾದ ಜಯರಾಜ್ ಬಂಗೇರ, ಜೇಸೀಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾದ ಸವಿತಾ ನಿರ್ಮಲ್ ಉಪಸ್ಥಿತರಿದ್ದರು. ಇಂಟರಾಕ್ಟ್ ಕ್ಲಬ್ ನ ದಿನಕರ್ ಪೂಜಾರಿ ಕಾರ್ಯಕ್ರಮ ಸಂಯೋಜಿಸಿದ್ದರು. ಜೇಸಿ ಐ ಪಂಜದ ವಲಯ ತರಬೇತುದಾರ ಸವಿತಾರ ಮೂಡುರು ತರಬೇತಿ ನಡೆಸಿ ಕೊಟ್ಟರು.