ಬಂಟ್ವಾಳ ಉಪನೋಂದಣಾಧಿಕಾರಿ ಕಚೇರಿಯನ್ನು ನೂತನ ಮಿನಿ ವಿಧಾನಸೌಧ ಕಟ್ಟಡದ ಮೊದಲ ಮಹಡಿಗೆ ಸ್ಥಳಾಂತರಿಸುವ ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಬುಧವಾರ ಸಂಜೆ ಉದ್ಘಾಟಿಸಿದರು. ಇದೇ ವೇಳೆ ಪ್ರಥಮ ದಿನ ವಿವಾಹ ನೋಂದಣಿಯಾದವರಿಗೆ ಪ್ರಮಾಣ ಪತ್ರವನ್ನು ಸಚಿವರು ವಿತರಿಸಿದರು.
ಈ ಸಂದರ್ಭ ಉಪನೋಂದಣಾಧಿಕಾರಿ ಕವಿತಾ, ತಾ ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ ಪದ್ಮಶೇಖರ ಜೈನ್, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಆರಾಧನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಪುರಸಭಾ ಸದಸ್ಯರಾದ ಜಗದೀಶ್ ಕುಂದರ್, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಉಮ್ಮರ್ ಫಜೀರು, ಸಜಿಪಮೂಡ ಗ್ರಾ ಪಂ ಮಾಜಿ ಸದಸ್ಯ ಕರೀಂ ಬೊಳ್ಳಾಯಿ ಮೊದಲಾದವರು ಉಪಸ್ಥಿತರಿದ್ದರು.
ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ | ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕಾರ್ಯಕ್ರಮ (more…)
| ರಾಯಿ ಗ್ರಾಮ ಪಂಚಾಯಿತಿ: 19 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ (more…)