ವಿಟ್ಲದ ಕನ್ಯಾನ ಗ್ರಾಮದ ಕಳಂಜಿ ಮಲೆ ರಕ್ಷಿತಾರಣ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಸುಮಾರು ಅಂದಾಜು 10 ಎಕರೆಯಷ್ಟು ಜಾಗದಲ್ಲಿದ್ದ ಬೆಲೆಬಾಳುವ ಮರಗಳು ಬೆಂಕಿಗಾಹುತಿಯಾಗಿದೆ.
ಈ ಘಟನೆ ಬೆಂಕಿ ಅಕಸ್ಮಿಕವೋ ? ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಗುರುವಾರ ಮಧ್ಯಾಹ್ನ ವೇಳೆಗೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾಡ್ಗಿಚ್ಚಿನಂತೆ ಹರಡಿ ಭಾಗಶ ಸುಟ್ಟು ಹೋದವು. ಬಂಟ್ವಾಳದಿಂದ ಅಗ್ನಿಶಾಮಕ ದಳ ಆಗಮಿಸಿದ್ದರೂ ಬೆಂಕಿ ತೀವ್ರತೆ ಹೆಚ್ಚಾಗಿದ್ದರಿಂದ ತಡರಾತ್ರಿ ವರೆಗೂ ಬೆಂಕಿ ನಂದಿಸಲು ಸಾಧ್ಯವಾಗಿರಲಿಲ್ಲ. ಅಗ್ನಿಶಾಮಕದಳದ ವಾಹನದಲ್ಲಿ ನೀರು ಖಾಲಿ ಆಗಿ ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಬಳಿಕ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ 200 ಕ್ಕಿಂತಲೂ ಅಧಿಕ ಯುವಕರು ಬೆಂಕಿ ನಂದಿಸಲು ಕೈ ಜೋಡಿಸಿ, ಸ್ಥಳೀಯದಿಂದ ನೀರು ಸಂಗ್ರಹಿಸಿ ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.