ಬಾರದ ವೇತನ: 25ರಂದು ಅಂಗನವಾಡಿ ಬಂದ್

28ರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೂ ಬರೋದಿಲ್ಲ ಎಂದ ಅಂಗನವಾಡಿ ಕಾರ್ಯಕರ್ತೆಯರು

www.bantwalnews.com

ಜಾಹೀರಾತು

ಬಂಟ್ವಾಳ ಹಾಗೂ ವಿಟ್ಲ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿರ ಮೂರು ತಿಂಗಳ ವೇತನ ಪಾವತಿಗೆ ಒತ್ತಾಯಿಸಿ . 25ರಂದು ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಧರಣಿ ನಡೆಸಲಾಗುವುದು ಎಂದು ಬಂಟ್ವಾಳ ಅಂಗನವಾಡಿ ಕಾರ್ಯಕರ್ತೆಯರ ಸಂಘದ ನಿರ್ದೇಶಕಿ ಉಷಾ ಎಂ. ಹೇಳಿದ್ದಾರೆ.

ಶನಿವಾರ ಸಂಜೆ ಬಂಟ್ವಾಳ ಪ್ರೆಸ್ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ಹಾಗೂ ವಿಟ್ಲ ಶಾಖೆಯಲ್ಲಿ ಸುಮಾರು 1141 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಕರ್ತವ್ಯ ನಿರ್ವಹಿಸುತ್ತಿದ್ದು, ಅಲ್ಪ ವೇತನದಲ್ಲಿ ಇಲಾಖೆಯ ಕೆಲಸ ಕಾರ್ಯಗಳಲ್ಲದೆ ಇತರ ಕೆಲಸಗಳನ್ನು ಕೂಡಾ ಮಾಡಿಸಲಾಗುತ್ತಿದೆ. ಆದರೆ ಕಳೆದ ಅಕ್ಟೋಬರ್ ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಹೇಳಿದರು.

ಜಾಹೀರಾತು

ರಾಷ್ಟ್ರೀಯ ಕಾರ್ಯಕ್ರಮವಾಗಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸಂಪೂರ್ಣ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಆದರೆ ವೇತನ ಪಾವತಿಯಾದ ಹಿನ್ನೆಲೆಯಲ್ಲಿ . 28ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ವಿತರಣಾ ಕಾರ್ಯಕ್ರಮದ ಕರ್ತವ್ಯಕ್ಕೆ ಹಾಜರುಗುವುದಿಲ್ಲ. ಬಗ್ಗೆ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೂ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.

. 18ರಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರು ಕೈಗೆ ಕಪ್ಪು ಪಟ್ಟಿ ಧರಿಸಿ ಅರ್ಧ ದಿನ ಮಾತ್ರ ಕೇಂದ್ರ ತೆರೆದು ಕರ್ತವ್ಯ ನಿರ್ವಹಿಸಲು ನಿರ್ಧರಿಸಿದ್ದು, ವೇತನ ಪಾವತಿಯಾಗುವರೆಗೂ ಹೋರಾಟವನ್ನು ಮುಂದುವರಿಸಲಾಗುವುದು. “ವೇತನವಿಲ್ಲದ ವೇತನ ಸಭೆ ಬೇಡಎಂಬ ಘೋಷಣೆಯೊಂದಿಗೆ ವೇತನ ಸಭೆಯನ್ನೂ ಕೂಡಾ ಬಹಿಷ್ಕರಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ರೇಣುಕಾ ಪೊಳಲಿ, ಉಮಾವತಿ ಬಾಳ್ತಿಲ, ಭಾರತಿ, ಜಯಶ್ರೀ, ಚಂದ್ರಕಲಾ, ರೇಖಾ ಇರಾ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಾರದ ವೇತನ: 25ರಂದು ಅಂಗನವಾಡಿ ಬಂದ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*