ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವು ಗೈದ ಘಟನೆ ತಾಲೂಕಿನ ಪಣೋಲಿಬೈಲು ಬಳಿ ಸೋಮವಾರ ರಾತ್ರಿ ನಡೆದಿದೆ.
ಪಣೋಲಿಬೈಲು ನಿವಾಸಿ ಮಧುಕೃಷ್ಣ ಸೋಮಯಾಜಿ ಎಂಬವರಿಗೆ ಸೇರಿದ ಮನೆಯಲ್ಲಿ ಕೃತ್ಯ ನಡೆದಿದೆ.
ಮನೆ ಮಂದಿ ಮಲಗಿರುವ ಸಂದರ್ಭದಲ್ಲಿ ಹಿಂದಿನ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು, ಕೋಣೆಯಲ್ಲಿದ್ದ ಕಪಾಟಿನ ಬಾಗಿಲು ಮುರಿದು ಅದರೊಳಗಿದ್ದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದಾರೆ. ಏಳುವರೆ ಪವನ್ ಚಿನ್ನ, 60 ಸಾವಿರ ರೂ. ಮೌಲ್ಯದ ಬೆಳ್ಳಿ ಹಾಗೂ 35 ಸಾವಿರ ರೂ. ಕಳವಾಗಿರುವುದಾಗಿ ಮನೆ ಮಾಲಕ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಎಸೈ ಚಂದ್ರಶೇಖರ, ಅಪರಾಧ ವಿಭಾಗದ ಎಸ್ಸೈ ಹರೀಶ್, ಎಎಸ್ಸೈ ಸಂಜೀವ, ಎಚ್.ಸಿ. ಸುರೇಶ್ ಪಡಾರ್ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)