ಬಂಟ್ವಾಳ

ಎನ್‌ಪಿಎಸ್ ನೌಕರರ ಸಂಘದಿಂದ ಪ್ರತಿಭಟನೆ, ಮನವಿ ಸಲ್ಲಿಕೆ

ಅವೈಜ್ಞಾನಿಕ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್)ಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜ. 20ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನಲ್ಲಿ “ಫ್ರೀಡಂ ಪಾರ್ಕ್ ಚಲೋ” ಒಂದು ದಿನದ ಉಪವಾಸ ಧರಣಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ಗುರುವಾರ ನಡೆಯಿತು.

ಬಳಿಕ ತಹಶೀಲ್ದಾರ್ ಪುರಂದರ ಹೆಗ್ಡೆ ಮೂಲಕ ಮನವಿ ಸಲ್ಲಿಸಲಾಯಿತು.ಎನ್‌ಸಿಪಿ ಸರಕಾರಿ ನೌಕರರ ವೇತನದಲ್ಲಿ ಶೇ.೧೦ರಷ್ಟು ಕಡಿತಗೊಳಿಸಿ ಖಾಸಗಿ ಶೇರು ಮಾರುಕಟ್ಟೆಯಲ್ಲಿ ಹೂಡಲಾಗುತ್ತಿದೆ. ಇದರಿಂದಾಗಿ ನೌಕರರಲ್ಲಿ ಅಭದ್ರತೆ ಹಾಗೂ ಅನಿಶ್ಚಿತತೆ ಉಂಟಾಗಿದೆ. ಇದರಿಂದ ರಾಜ್ಯದಲ್ಲಿ ೧.೮೦ ಲಕ್ಷ ಸರಕಾರಿ ನೌಕರರು ಸೇವಾ ನಿವೃತ್ತಿಯ ಸಂದರ್ಭ ಪಿಂಚಣಿ ಮತ್ತು ಇತರ ಸವಲತ್ತುಗಳಿಂದ ವಂಚಿತರಾಗಿ ಸಾಮಾನ್ಯ ಅನ್ಯಾಯಕ್ಕೆ ತುತ್ತಾಗಲಿದ್ದಾರೆ ಎಂದು ಸರಕಾರಿ ನೌಕರರ ಸ:ಂಘದ ತಾಲೂಕು ಘಟಕ ಅಧ್ಯಕ್ಷ ಉಮಾನಾಥ ರೈ ಮೇರಾವು ಈ ಸಂದರ್ಭ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ತುಂಬೆ, ಗೌರವ ಸಲಹೆಗಾರರಾದ ಕೆ.ರಮೇಶ್ ನಾಯಕ್ ರಾಯಿ, ಶಿವಪ್ರಸಾದ್ ಶೆಟ್ಟಿ, ಜಯರಾಮ, ಜೋಯೆಲ್ ಲೋಬೊ, ಕಾರ್ಯದರ್ಶಿ ಗುರುಮೂರ್ತಿ, ತಾಲೂಕು ಸಂಚಾಲಕ ಅವಿನಾಶ, ಉಪಾಧ್ಯಕ್ಷ ಯಮುನಪ್ಪ, ನೀತಾ ಗಟ್ಟಿ, ಕೋಶಾಧಿಕಾರಿ ಶಿವರಾಮ, ಬಸಯ್ಯ ಆಲಮಟ್ಟಿ, ಬಸವರಾಜ್, ಸರಕಾರಿ ನೌಕರರ ಸಂಘದ ತಾಲೂಕು ಖಜಾಂಚಿ ಜೆ.ಜನಾರ್ದನ, ಉಪಾಧ್ಯಕ್ಷರಾದ ಸುನಂದಾ ಕೆ.ಪಿ, ಹರಿಪ್ರಸಾದ್ ಶೆಟ್ಟಿ, ನವೀನ್ ಬಿ, ಮುಂತಾದವರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts