ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ಸಮ್ಮೇಳನ ಹಾಗೂ ಮಹಾಸಭೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ತಹಶೀಲ್ದಾರ್ ಪುರಂದರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ರೋಟರಿ, ಲಯನ್ಸ್ ಕ್ಲಬ್ ಗಳಂತೆ ಗ್ಯಾರೇಜ್ ಮಾಲಕರ ಸಂಘವೂ ಕೂಡ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಒರ್ವ ಬಡ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಮೂಲಕ ಆಕೆಯ ಬಾಳಿಗೆ ಆಸರೆಯಾಗಿರುವುದು ಶ್ಲಾಘನೀಯ ಎಂದರು. ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಾಗ ತೋರಿಸಿಕೊಟ್ಟರೆ ಸಂಘದ ಕಟ್ಟಡಕ್ಕೆ ನಿವೇಶನ ಮಂಜೂರು ಮಾಡಿ ಕೊಡುವುದಾಗಿ ತಿಳಿಸಿದರು. ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ಎಂ.ಎಸ್. ಪ್ರಸನ್ನ, ಸಂಘದ ಜಿಲ್ಲಾಧ್ಯಕ್ಷ ದಿವಾಕರ, ಕೋಶಾಧಿಕಾರಿ ವಿಶ್ವನಾಥ ಬಿ. ವೇದಿಕೆಯಲ್ಲಿದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಕಾರ್ಯದರ್ಶಿ ಜಗದೀಶ್ ರೈ ಸ್ವಾಗತಿಸಿ ವರದಿ ವಾಚಿಸಿದರು, ಗೌರವಾಧ್ಯಕ್ಷ ಸುಧಾಕರ ಸಾಲ್ಯಾನ್ ಪ್ರಸ್ತಾವಿಸಿದರು. ಸಿದ್ದೀಕ್ ವಂದಿಸಿದರು, ಶಿಕ್ಷಕ ಸಂತೋಷ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ಸುವರ್ಣ, ಸುಧೀರ್, ಭಾಸ್ಕರ, ಸಹಕರಿಸಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಆಟಗಳನ್ನು ನಡೆಸಲಾಯಿತು.