ಬಿಐಟಿ ಮತ್ತು ಬೀಡ್ಸ್ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಸಿಇಟಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಕಾರ್ಯಾಗಾರ ಬಂಟ್ವಾಳ ತಾಲ್ಲೂಕಿನ ವಾಮದಪದವು ಸಮೀಪದ ಬಸ್ತಿಕೋಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತಿಚೆಗೆ ನಡೆಯಿತು.
ಸಿಇಟಿ ಪೂರಕ ಪರೀಕ್ಷೆಯನ್ನು ಬಿಐಟಿ ಕಾಲೇಜಿನ ಅಧ್ಯಾಪಕ ಇಮ್ರಾನ್ ಯು. ಎ, ನಿತಿನ್, ಸುಶಾಂತ್ ಹಾಗೂ ಮುಸ್ತಫಾ ಖಲೀಲ್ ವಿಟ್ಲ ನಡೆಸಿಕೊಟ್ಟರು.
ವಿಜೇತ ವಿದ್ಯಾರ್ಥಿಗಳಾದ ಸಿಂಚನ, ಮುಫಿದ ಹಾಗೂ ಅಮಿಶ ಅವರಿಗೆ ಪ್ರಮಾಣ ಪತ್ರ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ಸರಕಾರಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಸಿಇಟಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸುಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು.ಈ ಕಾರ್ಯಕ್ರಮವು ಬಿಐಟಿ ಪ್ರಾಂಶುಪಾಲ ಡಾ. ಆಂಥೋನಿ ಯವರ ಮಾರ್ಗದರ್ಶನದಲ್ಲಿ ನಡೆಯಿತು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…