ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ.25ರಂದು ನಿಮ್ಮ ಮತ, ನಿಮ್ಮ ಹಕ್ಕು ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ಬಿ.ಸಿ.ರೋಡಿನ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು.
ಜನವರಿ ೨೫ ಭಾರತ ಚುನಾವಣಾ ಆಯೋಗದ ಸಂಸ್ಥಾಪನಾ ದಿನವಾಗಿದ್ದು, ಲಕ್ಷಾಂತರ ಯುವಜನತೆ ಪ್ರತಿ ಜನವರಿಯಲ್ಲಿ ದೇಶಾದ್ಯಂತ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನೋಂದಾವಣೆಗೊಳ್ಳುತ್ತಾರೆ. ಪ್ರಜಾಪ್ರಭುತ್ವ ಬಲಪಡಿಸಲು ಯುವಜನತೆ ಚುನಾವಣಾ ಪ್ರಕ್ರಿಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ಈ ಸಂದರ್ಭ ಎಸ್.ವಿ.ಎಸ್.ಕಾಲೇಜು ಬಂಟ್ವಾಳದ ಉಪನ್ಯಾಸಕ ಪ್ರೊ.ನಾರಾಯಣ ಭಂಡಾರಿ ಹೇಳಿದರು.
ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಪ್ರಕಾಶ್, ತಾಪಂ ಮ್ಯಾನೇಜರ್ ಶಾಂಭವಿ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ವಹಿಸಿದ್ದರು. ಇದೇ ಸಂದರ್ಭ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.