ಬಂಟ್ವಾಳ ತಾಲೂಕು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಆಶ್ರಯದಲ್ಲಿ ಫೆ.18ರಂದು ಭಾನುವಾರ ಲೋಕಕಲ್ಯಾಣಾರ್ಥವಾಗಿ ಬಿ.ಸಿ.ರೋಡಿನಲ್ಲಿ ನಡೆಯಲಿರುವ ಸೀತಾರಾಮ ಕಲ್ಯಾಣೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆಯಲ್ಲಿ ಭಾನುವಾರ ಮೆಲ್ಕಾರ್‌ನ ಬಿರ್ವ ಸಭಾಭವನದಲ್ಲಿ ನಡೆಯಿತು.
ಸಮಿತಿಯ ಗೌರವಾಧ್ಯಕ್ಷ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿ ಅಪಸ್ವರಗಳಿಗೆ ಕಿವಿಗೊಡದೆ ರಾಜಕೀಯ ಬಿಟ್ಟು ಎಲ್ಲರೂ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ಒಳ್ಳೆಯ ಉದ್ದೇಶದ ಕಾರ್ಯಕ್ರಮಕ್ಕೆ ಎಲ್ಲರ ಬೆಂಬಲ ಅಗತ್ಯವಿದೆ. ದೇವರ ಕಾರ್ಯದ ಮೂಲಕ ಲೋಕ ಕಲ್ಯಾಣ ಕಾರ್ಯಕ್ರಮದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬೊಳ್ಳಾಯಿ ಮಾತನಾಡಿ ಬಡ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕನ್ಯಾಡಿ ಶ್ರೀಗಳು ಶಾಲೆ ಆರಂಭಿಸುವ ಯೋಜನೆಯನ್ನು ರೂಪಿಸಿದ್ದು ಅದು ಸಾಕಾರಗೊಳ್ಳಲು ಎಲ್ಲರ ಸಹಕಾರ ಅಗತ್ಯ ಎಂದರು.
ಪುರಸಭಾ ಸಮಿತಿ ಸಂಚಾಲಕ ರಾಮದಾಸ್ ಬಂಟ್ವಾಳ ಮಾತನಾಡಿ, ಒಂದೇ ವೇದಿಕೆಯಡಿ ಹಿಂದು ಸಮಾಜವನ್ನು ಬಲಪಡಿಸುವ ಉದ್ದೇಶದಿಂದ ಪಕ್ಷಬೇಧ ಮರೆತು ಎಲ್ಲರೂ ಸೇರಿರುವುದು ಉತ್ತಮ ಬೆಳವಣಿಗೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿಯಿ ಸದಸ್ಯರಾದ ತುಂಗಪ್ಪ ಬಂಗೇರಾ, ಮಮತಾ ಡಿ.ಎಸ್. ಗಟ್ಟಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರಾ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ತಾಲೂಕು ಸಂಚಾಲಕ ಬಿ. ಮೋಹನ್, ಪುರಸಭಾ ಸಮಿತಿ ಅಧ್ಯಕ್ಷ ವಿಶ್ವನಾಥ ಬಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಕೋಶಾಧಿಕಾರಿ ರಾಜೇಶ್ ಬಾಳೆಕಲ್ಲು, ವಿವಿಧ ಸಮಿತಿ ಪ್ರಮುಖರಾದ ಲೋಕೇಶ್ ಶಾಂತಿ, ರತ್ನಾಕರ ಶೆಟ್ಟಿ, ಜಯಾನಂದ ಪೆರಾಜೆ, ನಾರಾಯಣ ಗೌಡ, ರಾಜೇಶ್ ಸುವರ್ಣ, ಚರಣ್ ಬಡಕಬೈಲು, ಗಣೇಶ್, ಭಾರತಿ ಬೇಬಿ ಕುಂದರ್, ಗೋಪಾಲ ಸುವರ್ಣ, ಗಂಗಾಧರ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶಶಿಧರ್ ಉಪಸ್ಥಿತರಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಸ್ವಾಗತಿಸಿದರು, ಜಿಲ್ಲಾ ಸಂಚಾಲಕ ಟಿ.ಕೃಷ್ಣಪ್ಪ ಪೂಜಾರಿ ಕಾರ್ಯಕ್ರಮದ ರೂಪರೇಷೆಯ ಬಗ್ಗೆ ತಿಳಿಸಿದರು, ಸ್ವಾಗತ ಸಮಿತಿ ಸಂಚಾಲಕ ಬೇಬಿ ಕುಂದರ್ ವಂದಿಸಿದರು, ಜತೆ ಕಾರ್ಯದರ್ಶಿ ಸಂತೋಷ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಸೀತಾರಾಮ ಕಲ್ಯಾಣೋತ್ಸವ, ಗುರುವಂದನಾ ಕಾರ್ಯಕ್ರಮ ಪೂರ್ವಭಾವಿ ಸಭೆ"