ಸಚಿವ ಬಿ.ರಮಾನಾಥ ರೈ ಅವರು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭಾನುವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ನಿವಾರಣೆಗೆ ಇರುವ ಹನಿಗಳನ್ನು ಮಕ್ಕಳಿಗೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಧನಲಕ್ಷ್ಮೀ ಸಿ. ಬಂಗೇರಾ, ಆಡಳಿತ ವೈದ್ಯಾಧಿಕಾರಿ ಡಾ. ಸದಾಶಿವ ಸಹಿತ ಗಣ್ಯರು ಉಪಸ್ಥಿತರಿದ್ದರು. ಡಾ. ದೀಪಾ ಪ್ರಭು ಸ್ವಾಗತಿಸಿದರು.
ಬಂಟ್ವಾಳ ತಾಲೂಕಿನಲ್ಲಿ 31353 ಮಕ್ಕಳಿಗೆ ಪೋಲಿಯೋ ಹನಿ ನೀಡಬೇಕಾಗಿದ್ದು, ತಾಲೂಕಿನಾದ್ಯಂತ 196 ಬೂತ್ ಗಳನ್ನು ತೆರೆಯಲಾಗಿದೆ. ಇದರಲ್ಲಿ 784 ಕಾರ್ಯಕರ್ತೆಯರು ಲಸಿಕೆದಾರರಾಗಿ ಭಾಗವಹಿಸಿದ್ದಾರೆ.
Be the first to comment on "ಪಲ್ಸ್ ಪೋಲಿಯೋ: ಸಚಿವ ರೈ ಅವರಿಂದ ಬಂಟ್ವಾಳದಲ್ಲಿ ಉದ್ಘಾಟನೆ"