ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಗುಡ್ಡೆವೊಂದಕ್ಕೆ ಗುರುವಾರ ಮಧ್ಯಾಹ್ನ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ.
ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಬುಡೋಳಿ ಸಮೀಪ ಗುಡ್ಡೆಯಲ್ಲಿ ಒಣಹುಲ್ಲುಗಳಿಗೆ ಆಕಸ್ಮಿಕ ಬೆಂಕಿ ತಗಲಿ ಸಂಪೂರ್ಣ ಗುಡ್ಡೆಯನ್ನು ಆವರಿಸಿಕೊಂಡಿತ್ತು. ಮಾಹಿತಿಯ ಮೇರೆಗೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಸತತ ೩ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಹೆದ್ದಾರಿಯ ರಸ್ತೆ ಬದಿಯಲ್ಲಿದ್ದ ಒಣಹುಲ್ಲು ಸಹಿತ ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿತ್ತು ಎನ್ನಲಾಗಿದೆ.
ಹಾನಿಯ ಬಗ್ಗೆ ಇದುವರೆಗೂ ಯಾವುದೇ ವರದಿಯಾಗಿಲ್ಲ. ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕಿಸಿರುವ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಬಂಟ್ವಾಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…