ಮಾಣಿ ಸಮೀಪ ಉಪ್ಪಿನಂಗಡಿಗೆ ತೆರಳುತ್ತಿದ್ದ ಮಾರುತಿ ಓಮ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು, ಓಮ್ನಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಅಪಘಾತ ನಡೆದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಧಾವಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.