ಸಮಾಜ ನಿರ್ಮಾಣಕ್ಕೆ ಸಾಹಿತ್ಯ ಸಹಕಾರಿಯಾಗಿದ್ದು, ಇಂಥಹ ಸಾಹಿತ್ಯ ಸಾರ್ವಕಾಲಿಕವಾಗಿರುತ್ತದೆ. 19ನೇ ವರ್ಷದ ಆಚರಣೆಯ ಸಮಯ ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗಲಿ. ಕ್ಷೇತ್ರದಲ್ಲಿ ತುಳುನಾಡ ಸಂಸ್ಕೃತಿ ದರ್ಶನ ನಿರ್ಮಾಣ ಕಾರ್ಯದ ಚಿಂತನೆ ಇದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಶುಕ್ರವಾರ ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ತುಳುನಾಡ ಜಾತ್ರೆ 2018- ಶ್ರೀ ಒಡಿಯೂರು ರಥೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಆಶೀರ್ವಚನ ನೀಡಿದರು.
ಸಾಧ್ವಿ ಶ್ರೀ ಮಾತಾನಂದಮಯೀ, ತುಳುನಾಡ ನುಡಿ ನಡಕೆ ಕಾರ್ಯಕ್ರಮದ ಸಂಚಾಲಕ ವಸಂತಕುಮಾರ್ ಪೆರ್ಲ , ಹಿರಿಯ ಪತ್ರಕರ್ತ ಮಲಾರು ಜಯರಾಮ ರೈ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಮಂಗಳೂರು ಘಟಕದ ಅಧ್ಯಕ್ಷ ಜಯಂತ್ ಜೆ ಕೋಟ್ಯಾನ್, ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ತಾರಾನಾಥ ಟಿ. ಕೊಟ್ಟಾರಿ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ ಶೆಟ್ಟಿ ಉಪಸ್ಥಿತರಿದ್ದರು.
ದಕ್ಷಿಣ ವಲಯ ಸಂಯೋಜಕಿ ಲೀಲಾ ಪ್ರಾರ್ಥಿಸಿದರು. ಒಡಿಯೂರು ತುಳುಕೂಟದ ಅಧ್ಯಕ್ಷ ಎಚ್. ಕೆ. ಪುರುಷೋತ್ತಮ ಸ್ವಾಗತಿಸಿದರು. ಸಂತೋಷ್ ಭಂಡಾರಿ ವಂದಿಸಿದರು.