ಬಂಟ್ವಾಳ

ನಗರೋತ್ಥಾನ ಯೋಜನೆ: ಬಂಟ್ವಾಳದಲ್ಲಿ ವಿವಿಧ ಕಾಮಗಾರಿಗೆ ಸಚಿವ ರೈ ಚಾಲನೆ

ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ನಗರೋತ್ಥಾನ-3 ಮತ್ತು ಎಸ್‌ಸಿಪಿ ಹಾಘೂ ಟಿಎಸ್‌ಪಿ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ಅವರು ಶನಿವಾರ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಗರೋತ್ಥಾನ ೨ನೇ ಹಂತ ಹಾಗೂ ಇತರ ಅನುದಾನ ಸೇರಿ ಒಟ್ಟು ಸುಮಾರು 20.48 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇವುಗಳಲ್ಲಿ 338 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗತ್ತಿದೆ ಎಂದು ಮಾಹಿತಿ ನೀಡಿದರು.

ಜಾಹೀರಾತು

ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಜಕ್ರಿಬೆಟ್ಟುವಿನಲ್ಲಿ 2ನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು 52.79 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಮುಂದಿನ ಮಾರ್ಚ್ ತಿಂಗಳಲ್ಲಿ ಪುರವಾಸಿಗಳಿಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ತ್ಯಾಜ್ಯ ನೀರು ನೇತ್ರಾವತಿ ನದಿ ಸೇರದಂತೆ 2ನೇ ಹಂತದ ಒಳಚರಂಡಿ ಯೋಜನೆಗೆ 56.54 ಕೋಟಿ ರೂ. ಅನುದಾನ ಮಂಜೂರಾತಿ ದೊರಕಿದ್ದು, ಶೀಫ್ರದಲ್ಲೇ ಇದರ ಕಾಮಗಾರಿಯನ್ನು ಕೈಗೆತ್ತಿಗೊಳ್ಳಲಾಗುವುದು. ಅಲ್ಲದೇ ಪುರಸಭೆಯನ್ನು ನಗರ ಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದೆ ಎಂದು ಸಚಿವರು, ಕ್ಷೇತ್ರದ ಅಭಿವೃದ್ಧಿಯಲ್ಲಿ ತಾನು ಯಾವುದೇ ಉದಾಸೀನ ತೋರಿಲ್ಲ, ಇದೇ ತನಗೆ ಶ್ರೀರಕ್ಷೆಯಾಗಲಿದೆ ಎಂದರು.

 

ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿ, ಪಲ್ಲಮಜಲು ಮುಖ್ಯರಸ್ತೆ ಅಭಿವೃದ್ಧಿ, ಕಾಮೆರೆಕೋಡಿ ಮೊಡಂಕಾಪು ಮುಖ್ಯ ರಸ್ತೆ, ಗಾಂದೋಡಿ, ಕೈಕಂಬ, ಪರ್ಲಿಯಾ ಮಸೀದಿ ರಸ್ತೆ, ಅಲೆತ್ತೂರು ದೈವಸ್ಥಾನ ರಸ್ತೆ, ಬಿ.ಸಿ.ರೋಡಿನ ಬಸ್ ನಿಲ್ದಾಣದ ಹಿಂಭಾಗ, ಕಾಮಾಜೆ ರಸ್ತೆ, ಪಾಣೆಮಂಗಳೂರಿನ ಕಸ್ಬಾ ಗ್ರಾಮದ ಗೂಡಿನಬಳಿ ಟ್ಯಾಂಕ್ ರಸ್ತೆ, ಜೈನರಪೇಟೆ ಮಸೀದಿ ರಸ್ತೆ, ಎಂ.ಎಚ್. ಪಕ್ಕದ ರಸ್ತೆ, ಬೋಗೋಡಿ, ಶಾಂತಿಗುಡ್ಡೆ, ಸುರುಳಿಗುಡ್ಡೆ ಪ್ರದೇಶದ ಸುಮಾರು ೧೫ ಕಡೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಯಾಸ್ಮೀನ್, ಮುಮ್ತಾಝ್ ಬಿ.ಸಿ.ಲತೀಫ್, ಇಕ್ಬಾಲ್ ಗೂಡಿನಬಳಿ, ಬಿ.ಮೋಹನ್, ಚಂಚಲಾಕ್ಷಿ, ಪ್ರಭಾ ಆರ್. ಸಾಲಿಯಾನ್, ಜಗದೀಶ್ ಕುಂದರ್, ಭಾಸ್ಕರ್ ಟೈಲರ್, ಶರೀಫ್ ಶಾಂತಿಯಂಗಡಿ, ಜೆಸಿಂತಾ, ಸಂಧ್ಯಾ, ಪ್ರವೀಣ್ ಬಿ., ನಾಮನಿರ್ದೇಶನ ಸದಸ್ಯ ಲೋಲಾಕ್ಷ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಇಂಜಿನೀಯರ್ ಡೊಮೆನಿಕ್ ಡಿಮೆಲ್ಲೊ ಮತ್ತಿತರರು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

19 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

3 days ago