ಬಿ.ಸಿ.ರೋಡ್ ಸಮೀಪ ಮೈದಾನದಲ್ಲಿ ಬೆಂಕಿ

ಜಾಹೀರಾತು

ಬಿ.ಸಿ.ರೋಡ್ ಬಿ.ಮೂಡ ಗ್ರಾಮದ ತಲಪಾಡಿಯ ಮೈದಾನದಲ್ಲಿ ಭಾನುವಾರ ಬೆಳಗ್ಗೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿತು. ರಾಷ್ಟ್ರೀಯ ಹೆದ್ದಾರಿಯ ಒಳರಸ್ತೆಯ ತಲಪಾಡಿಯ ಮೈದಾನದಲ್ಲಿ ಒಣಹುಲ್ಲುಗಳಿಗೆ ಆಕಸ್ಮಿಕ ಬೆಂಕಿ ತಗಲಿ ಸಂಪೂರ್ಣ ಗುಡ್ಡೆಯನ್ನು ಆವರಿಸಿಕೊಂಡಿತ್ತು.

ಮಾಹಿತಿಯ ಮೇರೆಗೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯರು ಸುತ್ತಮುತ್ತ ಮನೆಯಿಂದ ನೀರು ತಂದು ಸಹಕರಿಸಿದರು.  ಸುಮಾರು ಎರಡು ಎಕರೆ ಪ್ರದೇಶ ಸಹಿತ ಕೆಇಬಿ ಉಪ ಘಟಕದ ಹಿಂಭಾಗದ ಗುಡ್ಡೆಯಲ್ಲಿ ಬೆಂಕಿ ವ್ಯಾಪಿಸಿದ್ದು, ಬಂಟ್ವಾಳ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸುವಂತಾಗಿದೆ. ಹಾನಿಯ ಬಗ್ಗೆ ಇದುವರೆಗೂ ಯಾವುದೇ ವರದಿಯಾಗಿಲ್ಲ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಿ.ಸಿ.ರೋಡ್ ಸಮೀಪ ಮೈದಾನದಲ್ಲಿ ಬೆಂಕಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*