ಬಿ.ಸಿ.ರೋಡ್ ಬಿ.ಮೂಡ ಗ್ರಾಮದ ತಲಪಾಡಿಯ ಮೈದಾನದಲ್ಲಿ ಭಾನುವಾರ ಬೆಳಗ್ಗೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿತು. ರಾಷ್ಟ್ರೀಯ ಹೆದ್ದಾರಿಯ ಒಳರಸ್ತೆಯ ತಲಪಾಡಿಯ ಮೈದಾನದಲ್ಲಿ ಒಣಹುಲ್ಲುಗಳಿಗೆ ಆಕಸ್ಮಿಕ ಬೆಂಕಿ ತಗಲಿ ಸಂಪೂರ್ಣ ಗುಡ್ಡೆಯನ್ನು ಆವರಿಸಿಕೊಂಡಿತ್ತು.
ಮಾಹಿತಿಯ ಮೇರೆಗೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯರು ಸುತ್ತಮುತ್ತ ಮನೆಯಿಂದ ನೀರು ತಂದು ಸಹಕರಿಸಿದರು. ಸುಮಾರು ಎರಡು ಎಕರೆ ಪ್ರದೇಶ ಸಹಿತ ಕೆಇಬಿ ಉಪ ಘಟಕದ ಹಿಂಭಾಗದ ಗುಡ್ಡೆಯಲ್ಲಿ ಬೆಂಕಿ ವ್ಯಾಪಿಸಿದ್ದು, ಬಂಟ್ವಾಳ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸುವಂತಾಗಿದೆ. ಹಾನಿಯ ಬಗ್ಗೆ ಇದುವರೆಗೂ ಯಾವುದೇ ವರದಿಯಾಗಿಲ್ಲ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…