ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಪೋಲಿಸರು ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಎಂಟು ಜನ ಅರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲಾರಪಟ್ನ ಪಲ್ಗುಣಿ ನದಿ ತಟದಲ್ಲಿ ಸುಮಾರು ದಿನಗಳಿಂದ ಅಕ್ರಮವಾಗಿ ಮರಳು ಯಾಂತ್ರೀಕೃತ ದೋಣಿಗಳನ್ನು ಬಳಸಿ ತೆಗೆಯಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಡಿಶನಲ್ ಎಸ್ ಪಿ.ಸಜಿತ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ನಾಗರಾಜ ಮತ್ತು ಬಂಟ್ವಾಳ ಗ್ರಾಮಾಂತರ ಉಪನಿರೀಕ್ಷಕ ಪ್ರಸನ್ನ ಅವರ ನೇತ್ರತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಎಂಟು ಮಂದಿ ಆರೋಪಿಗಳನ್ನು ನಾಲ್ಕು ಲಾರಿ ಮತ್ತು ಹತ್ತು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು ಹದಿನೈದು ಲಕ್ಷ ಮೌಲ್ಯದ ಸೋತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Be the first to comment on "ಅಕ್ರಮ ಮರಳು ಅಡ್ಡೆಗೆ ದಾಳಿ"