ವ್ಯಕ್ತಿಯೋರ್ವ ಅಂತ್ಯಕ್ರಿಯೆಗೆ ಬೇಕಾದ ಮಡಿಕೆ, ಬಿಳಿಬಟ್ಟೆ, ಊದುಬತ್ತಿ ಮೊದಲಾದ ವಸ್ತುಗಳನ್ನು ಸ್ಮಶಾನಕ್ಕೆ ತಂದು, ಅಲ್ಲಿಂದಲೇ ಅತ್ತೆಗೆ ಕಾಲ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿ.ಸಿ.ರೋಡಿನ ರಾಜೇಶ್ (35) ಸಾವನ್ನಪ್ಪಿದಾತ. ಬಿ.ಸಿ.ರೋಡಿನ ಕೈಕುಂಜೆಯ ಹಿಂದೂ ರುದ್ರಭೂಮಿಯಲ್ಲಿ ಸೋಮವಾರ ಬೆಳಿಗ್ಗೆ ಘಟನೆ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿರುವ ಈತ, ಪತ್ನಿ, ಇಬ್ಬರು ಮಕ್ಕಳನ್ನು ಹೊಂದಿದ್ದಾನೆ.
ಜಾಹೀರಾತು
ಅಂತ್ಯಕ್ರಿಯೆಗೆ ಬೇಕಾದ ಮಡಿಕೆ, ಬಿಳಿಬಟ್ಟೆ ಊದುಬತ್ತಿ ಮೊದಲಾದ ವಸ್ತುಗಳನ್ನು ಸ್ಮಶಾನಕ್ಕೆ ತಂದಿರಿಸಿ ಅಲ್ಲಿಂದಲೇ ತನ್ನ ಅತ್ತೆಗೆ ದೂರವಾಣಿ ಕರೆ ಮಾಡಿ ತಾನು ಸಾಯುವುದಾಗಿ ತಿಳಿಸಿ ಸ್ಮಶಾನದ ಮೇಲ್ಛಾವಣಿಯ ಕಬ್ಬಿಣದ ರಾಡಿಗೆ ನೇಣು ಬಿಗಿದು ಈ ಕೃತ್ಯ ಎಸಗಿದ್ದಾನೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಶವದ ಮಹಜರು ನಡೆಸಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸ್ಮಶಾನದಲ್ಲೇ ನೇಣು ಬಿಗಿದು ಆತ್ಮಹತ್ಯೆ"
Be the first to comment on "ಸ್ಮಶಾನದಲ್ಲೇ ನೇಣು ಬಿಗಿದು ಆತ್ಮಹತ್ಯೆ"