www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ ಕ್ಷೇತ್ರಾದ್ಯಂತ ಆಗಿರುವ ಅಭಿವೃದ್ದಿ ಕಾರ್ಯಗಳನ್ನು ಜನರು ಗುರುತಿಸಿದ್ದು, ಅದುವೇ ನನಗೆ ಶ್ರೀರಕ್ಷೆ, ವಾಟ್ಸಪ್-ಫೇಸ್‌ಬುಕ್‌ಗಳಲ್ಲಿ ಮಾಡದ್ದನ್ನು ಮಾಡಿದ್ದೇನೆ ಎಂದು ಬಿಂಬಿಸುವ ಅಗತ್ಯ ನನಗಿಲ್ಲ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ವತಿಯಿಂದ ನೇರಳಕಟ್ಟೆ-ಗಣೇಶನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ಹಲವು ವರ್ಷಗಳಿಂದ ಜನತೆಯ ಸೇವೆ ಮಾಡಿದ್ದೇನೆ. ಇದೀಗ ಕೂಲಿ ಕೇಳುವ ಸಮಯ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೇರಿಸುವಲ್ಲಿ ಕಾರ್ಯಕರ್ತರು ಸನ್ನದ್ದರಾಗಬೇಕು, ನಾನು ಮಾಡಿದ ಅಭಿವೃದ್ದಿ ಕಾರ್ಯಗಳೇ ನನಗೆ ವಾಟ್ಸಪ್ ಮತ್ತು ಫೇಸ್‌ಬುಕ್ ಎಂದು ರೈ ಹೇಳಿದರು.
ಜಿ.ಪಂ. ಸದಸ್ಯರಾದ ಮಂಜುಳಾ ಮಾಧವ ಮಾವೆ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್ ಮಾತನಾಡಿದರು. ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಅಲ್ಪಸಂಖ್ಯಾತ ಘಟಕಾಧ್ಯಕ್ಷ ಅಲ್ಫೋನ್ಸ್ ಮೆನೇಜಸ್, ಯುವ ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಪ್ರಶಾಂತ್ ಕುಲಾಲ್, ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಹಾಜಿ ಆದಂ ಕುಂಞಿ, ನೆಟ್ಲಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ವಿಜಯ, ಉಪಾಧ್ಯಕ್ಷೆ ರೇವತಿ, ಸದಸ್ಯರಾದ ರಾಮಚಂದ್ರ ಶೆಟ್ಟಿ, ಸಮಿತಾ ಡಿ, ಪೂಜಾರಿ, ಪ್ರೇಮ, ವಾರ್ಡ್ ಸಮಿತಿ ಸದಸ್ಯರಾದ ಪ್ರಕಾಶ್ ರೈ ಕುರ್ಲೆತ್ತಿಮಾರು, ದೇರಣ್ಣ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಉಮ್ಮರ್ ಕುಂಞಿ ಪರ್ಲೊಟ್ಟು, ಅನಂತಾಡಿ ಗ್ರಾ.ಪಂ. ಮಾಜಿ ಸದಸ್ಯ ಅಬ್ಬಾಸ್ ಎನ್., ಬೂತ್ ಏಜೆಂಟ್ ಅಬೂಬಕ್ಕರ್ (ಅಬ್ಬು) ನೇರಳಕಟ್ಟೆ, ರಫೀಕ್ ಕೆತ್ತೆಪುಳಿ ಮೊದಲಾದವರು ಉಪಸ್ಥಿತರಿದ್ದರು. ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀಧರ ರೈ ಸ್ವಾಗತಿಸಿ, ಗ್ರಾ.ಪಂ. ಸದಸ್ಯ ಲತೀಫ್ ನೇರಳಕಟ್ಟೆ ವಂದಿಸಿದರು.
Be the first to comment on "ಮಾಡದ ಕೆಲಸ ಮಾಡಿದ್ದೇನೆ ಎಂದು ಹೇಳುವ ಅಗತ್ಯ ನನಗಿಲ್ಲ: ರಮಾನಾಥ ರೈ"