ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಪ್ರಗತಿ ಸಾಸಲಾಗಿದೆ. ಎಲ್ಲಾ ಸಮುದಾಯದವರ ಬೆಂಬಲದಿಂದ ಶಾಸಕನಾಗಿ ಯಾವುದೇ ಬೇಧ ವಿಲ್ಲದೆ ಸಮಾಜದ ಋಣ ತೀರಿಸುವ ಕಾರ್ಯ ಮಾಡಿದ್ದೇನೆ ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು.
ಬಂಟ್ವಾಳ ತಾಲೂಕು ಕಾವಳಪಡೂರು ವಗ್ಗ ಪಚ್ಚಾಜೆ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಕಾವಳಪಡೂರು ಗ್ರಾ.ಪಂ.ಸದಸ್ಯ ಪಿ.ಜಿನರಾಜ ಆರಿಗ, ಜಿ.ಪಂ. ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಅಧ್ಯಕ್ಷ ಜನಾರ್ದನ ಚಂಡ್ತಿಮಾರ್,ರಾಜ್ಯ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಜಗದೀಶ ಕೊಯಿಲ, ಬಂಟ್ವಾಳ ಕಾಂಗ್ರೆಸ್ ಮಹಿಳಾ ವಿಭಾಗ ಅಧ್ಯಕ್ಷೆ , ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಎ.ಪಿ.ಎಂ.ಸಿ ಸದಸ್ಯ ಅಬ್ದುಲ್‌ಲತೀಫ್, ಕಾಂಗ್ರೆಸ್ ವಕ್ತಾರ ರಿಯಾಝ್ ಹುಸೇನ್, ಗ್ರಾ.ಪಂ. ಸದಸ್ಯರಾದ ವೀರೇಂದ್ರ ಅಮೀನ್, ಗ್ರಾ.ಪಂ. ಮಾಜಿ ಅಧ್ಯಕ್ಷ ಮಾಣಿಕ್ಯರಾಜ್ ಜೈನ್, ಮಾಜಿ ಉಪಾಧ್ಯಕ್ಷೆ ಅಸುಂತಾ ಮರಿಯಾ ಡಿಸೋಜಾ, ಪ್ರಮುಖರಾದ ಡಾ|ಪ್ರವೀಣ್ ಸೇರಾ, ಸತೀಶ್ ಕುಮಾರ್‌ಪಿಲಿಂಗಾಲು, ಧನಂಜಯ ಹೆಗ್ಡೆ, ಇಸಾಕ್ ಮತ್ತಿತರರು ಉಪಸ್ಥಿತರಿದ್ದರು. ಕಾಂಗ್ರೆಸ್ ವಲಯ ಸಮಿತಿ ಅಧ್ಯಕ್ಷ , ಗ್ರಾ.ಪಂ.ಸದಸ್ಯಚಂದ್ರಶೇಖರ ಕರ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.