ಬಂಟ್ವಾಳ

ಬಂಟ್ವಾಳ ಸರ್ಕಾರಿ ಪ್ರ.ದರ್ಜೆ ಕಾಲೇಜಲ್ಲಿ ನೆರೆಹೊರೆ – ಯುವಸಂಸತ್ತು

 

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರ ಮಂಗಳೂರು ಮತ್ತು ಮಂಗಳಾ ಫ್ರೆಂಡ್ಸ್ ಸರ್ಕಲ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಮತ್ತು ಹಿರಿಯ ವಿದ್ಯಾರ್ಥಿ ಸಂಘ .ಪ್ರ. ಕಾಲೇಜು ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ನೆರೆಹೊರೆಯುವಸಂಸತ್ತು ಕಾರ್ಯಕ್ರಮ ನಡೆಯಿತು.

ಜಾಹೀರಾತು

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ .ಪ್ರ..ಕಾಲೇಜಿನ ಪ್ರಾಂಶುಪಾಲ ಅಜಕ್ಕಳ ಗಿರೀಶ ಭಟ್ ಅಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಬ್ಯಾಂಕ್ ಅಧಿಕಾರಿ ನಾರಾಯಣ ಹೆಗ್ಡೆ‌ , ಅರ್ಥಶಾಸ್ತ್ರ ಉಪಾನ್ಯಾಸಕ ಹೈದರಾಲಿ, ರಾಮಕೃಷ್ಣ ಮಠದ ಜಿತಕಾಮನಂದಜೀ ಮಹರಾಜ್  ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಮಾಹಿತಿ ಕಾರ್ಯಗಾರದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ಯುವಜನತೆಯ ಪಾತ್ರ, ಪ್ರಧಾನಮಂತ್ರಿ ಜನಧನ ಯೋಜನೆ, ಭಾರತ ಮಾಲಾ ಯೋಜನೆ, ಸ್ವಚ್ಛಭಾರತ, ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತಾಗಿ ಉಪಾನ್ಯಾಸ ನೀಡಲಾಗಿತ್ತು. ಆಂಗ್ಲ ಪ್ರಾಧ್ಯಾಪಕ ನಂದಕೀಶೋರ್ ಎಸ್. ಸ್ವಾಗತಿಸಿ, ಶಶಿಕಲಾ ವಂದಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೀರ್ತಿರಾಜ್ ಕರಂದಾಡಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ