ಪುದು ಗ್ರಾಪಂ: ಕಾಂಗ್ರೆಸ್ ಗೆ 30 ಸ್ಥಾನ ಗೆಲ್ಲುವ ವಿಶ್ವಾಸ

ಕಳೆದ ಬಾರಿ 22 ಸ್ಥಾನಗಳನ್ನು ನಮ್ಮ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದರು. ಈ ಬಾರಿ 30 ಸೀಟ್ ಗ್ಯಾರಂಟಿ. ಹೀಗೆಂದು ಪುದು ಚುನಾವಣಾ ಫಲಿತಾಂಶದ ಭವಿಷ್ಯ ನುಡಿದವರು ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ.

ಜಾಹೀರಾತು

ಬಂಟ್ವಾಳ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 18ರಂದು ನಡೆಯುವ ಪುದು ಗ್ರಾಪಂ ಚುನಾವಣೆಯ ಎಲ್ಲ 34 ಸ್ಥಾನಗಳಲ್ಲಿ ಯಾವುದೇ ಹೊಂದಾಣಿಕೆ ಇಲ್ಲದೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ಈಗಿನಂತೆಯೇ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು.

ಎಸ್.ಡಿ.ಪಿ.ಐ. ಮತ್ತು ಬಿಜೆಪಿ ಎರಡೂ ನಮಗೆ ಸಮಾನ ಪ್ರತಿಸ್ಪರ್ಧಿಗಳು. ಯಾರಲ್ಲೂ ನಾವು ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಆದರೆ ಅವೆರಡೂ ಒಳಒಪ್ಪಂದ ಮಾಡಿಕೊಂಡಿವೆ ಎಂಬ ಗುಮಾನಿ ವ್ಯಕ್ತಪಡಿಸಿದ ಅವರು, ವಾರ್ಡುಗಳ ವಿಂಗಡಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ರಸ್ತೆ, ನೀರು ಸಹಿತ ಅಗತ್ಯ ಮೂಲಸೌಕರ್ಯಗಳು ಒದಗಿಸಲಾಗಿದ್ದು, ಇದು ನಮಗೆ ಶ್ರೀರಕ್ಷೆಯಾಗಲಿದೆ ಎಂದರು. ಇದೇವೇಳೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮಂಗಳೂರು ತಾಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಪ್ರವೀಣ್ ಆಳ್ವ, ರಮ್ಲಾನ್, ಇಮ್ತಿಯಾಜ್ ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಪುದು ಗ್ರಾಪಂ: ಕಾಂಗ್ರೆಸ್ ಗೆ 30 ಸ್ಥಾನ ಗೆಲ್ಲುವ ವಿಶ್ವಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*