ನಗರೋತ್ಥಾನ-3ಯೋಜನೆಯಡಿ 31.05 ಲಕ್ಷ ರೂ. ವೆಚ್ಚದ ಅನುದಾನದಲ್ಲಿ ಬಂಟ್ವಾಳ ಕಸ್ಬಾ ಗ್ರಾಮದ 2ನೇ ವಾರ್ಡ್ನ ಅರ್ಬಿಗುಡ್ಡೆ -ಮಂಡಾಡಿ ಪ.ಜಾತಿ ರಸ್ತೆ ಮತ್ತು ಚರಂಡಿ ರಚನೆಯ ಕಾಮಗಾರಿ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಈ ಸಂದರ್ಭ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ , ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು , ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಪುರಸಭಾ ಸದಸ್ಯರಾದ ಬಿ. ಪ್ರವೀಣ್, ಗಂಗಾಧರ ಪೂಜಾರಿ, ಜಗದೀಶ್ ಕುಂದರ್, ನೋರ್ಬರ್ಟ್ ರೋಡ್ರಿಗಸ್, ಪ್ರಮುಖರಾದ ಎಫ್ರೆಂ ಸಿಕ್ವೇರಾ ಮತ್ತಿತರರು ಉಪಸ್ಥಿತರಿದ್ದರು.