ಕರಾವಳಿ ವ್ಯಾಪ್ತಿಯಲ್ಲಿ ಪ್ರಸಾರಗೊಳ್ಳಲಿರುವ ಕರಾವಳಿ ಸುದ್ದಿ ಕನ್ನಡ ಪತ್ರಿಕೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಬಿಡುಗಡೆಗೊಳಿಸಿದರು.
ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ವಿಲ್ಫ್ರೆಡ್ ಡಿಸೋಜ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಪತ್ರಿಕೆಯ ಪ್ರಕಾಶಕ ಸಚಿನ್ ರಾಜ್ ಶೆಟ್ಟಿ ಸ್ವಾಗತಿಸಿದರು. ಸಂಪಾದಕ ಗೋಪಾಲ ಅಂಚನ್ ಪ್ರಾಸ್ತಾವಿಕ ಮಾತುಗಳಾನ್ನಾಡಿದರು. ಅಬ್ದುಲ್ ಲತೀಫ್ ನೇರಳಕಟ್ಟೆ ವಂದಿಸಿದರು. ಲೇಖಕ ಎಚ್ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.