ಫೆ.18ರಂದು ನಡೆಯಲಿರುವ ಪುದು ಚುನಾವಣೆಯ ಪೂರ್ವ ಸಿದ್ದತಾ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ, ನೋಡಲ್ ಅಧಿಕಾರಿ, ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ ಸೋಮವಾರ ಬಂಟ್ವಾಳ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯಿತು.
ಚುನಾವಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಹಾಯಕ ಚುನಾವಣಾಧಿಕಾರಿ, ಪಿಡಿಓ ಶಿವಾನಂದ ಪೂಜಾರಿ, ನೋಡಲ್ ಅಧಿಕಾರಿ, ಪುರಸಭೆ ಸಮುದಾಯ ಸಮನ್ವಯ ಅಧಿಕಾರಿ ಮತ್ತಡಿ ತರಬೇತಿಯಲ್ಲಿ ಪಾಲ್ಗೊಂಡು ಸಮಾಲೋಚನೆ ನಡೆಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಪ್ರಕಾಶ್ ತರಬೇತಿ ನಡೆಸಿಕೊಟ್ಟರು.
ತಹಶೀಲ್ದಾರ್ ಪುರಂದರ ಹೆಗ್ಡೆ, ಚುನಾವಣಾ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಉಪ ತಹಶೀಲ್ದಾರ್ ಸೀತಾರಾಮ, ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್ ತರಬೇತಿ ಬಗ್ಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ. ದ್ವಿತೀಯ ದರ್ಜೆ ಸಹಾಯಕ ವಿನಯ ನಾಗರಾಜ್ ಹಾಜರಿದ್ದರು ಮತದಾನದ ವಿದ್ಯುನ್ಮಾನ ಯಂತ್ರಗಳ ಪ್ರಕ್ರಿಯೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…