ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಸ್ಥಳೀಯ ಸಂಸ್ಥೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ನರಿಕೊಂಬು, ನಾಯಿಲ ಓಂ ಶ್ರೀ ಗೆಳೆಯರ ಬಳಗದ 13ನೇ ವರ್ಷದ ವಾರ್ಷಿಕೋತ್ಸವ ಸಭಾಂಗಣದಲ್ಲಿ ಮಾತನಾಡಿದ ಅವರು, ಓಂ ಶ್ರೀ ಗೆಳೆಯರ ಬಳಗದ ಕಾರ್ಯ ಸಾಧನೆ ಶ್ಲಾಘನೀಯ ಎಂದರು.
ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ಮಾತನಾಡಿ ಯುವ ಜನರು ಸಾಂಘಿಕ ಸಮಾಜ ಸೇವೆಯ ಕಡೆಗೆ ಆಸಕ್ತಿ ವಹಿಸಬೇಕೆಂದು ತಿಳಿಸಿದರು.
ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ನರಿಕೊಂಬು ನಾಗರಿಕ ಜಾಗೃತಿ ಸಮಿತಿಯ ಅಧ್ಯಕ್ಷ ಪ್ರಕಾಶ್ ಕಾರಂತ್, ಸತ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಲೋಕೇಶ್ ಪಿ.ಜೆ, ನರಿಕೊಂಬು ವಲಯ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ಬೋಳಂತೂರು, ನಾಯಿಲ ಯಕ್ಷಗಾನ ಬಯಲಾಟ ಸಮಿತಿ ಅಧ್ಯಕ್ಷ ಲಿಂಗಪ್ಪ ಕೊಟ್ಟಾರಿ, ಉದ್ಯಮಿ ಉಮೇಶ್ ನೆಲ್ಲಿಗುಡ್ಡೆ, ಗ್ರಾ.ಪಂ. ಸದಸ್ಯರಾದ ದೇವದಾಸ್ ಎಂ, ಚಂದ್ರಾವತಿ, ಓಂ ಸತ್ಯ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ನಳಿನಿ ಉಮೇಶ್, ಓಂ ಶ್ರೀ ಗೆಳೆಯರ ಬಳಗದ ಅಧ್ಯಕ್ಷ ವಿಜಯ ಕುಲಾಲ್ ಉಪಸ್ಥಿತರಿದ್ದರು.
ಬಳಗದ ಸದಸ್ಯ ಶರತ್ ಸ್ವಾಗತಿಸಿ, ಪ್ರಣಾಮ್ ವಂದಿಸಿದರು. ದಿನೇಶ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಲಕುಮಿ ತಂಡದ ಕಲಾವಿದರಿಂದ ‘ಒವುಲಾ ಒಂತೆ ದಿನನೇ’ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.