ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಬಿ.ಮೂಡ ವಲಯದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಮಿತ್ತಬೈಲು ಲೋಲಾಕ್ಷ ಶೆಟ್ಟಿ ಮನೆ ಆವರಣದಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಸಚಿವ ರೈ, ಬಡವರಿಗೆ ಬದುಕು ಕೊಟ್ಟ ಸರಕಾರ ಕಾಂಗ್ರೆಸ್ ಪಕ್ಷ ನೇತೃತ್ವದ್ದು ಎಂದರು. ಮಕ್ಕಳಿಗೆ ಉಚಿತ ಬಸ್ ಪಾಸ, ಉಚಿತ ವಿದ್ಯಾಬ್ಯಾಸವನ್ನು ಒದಗಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಪಶ್ಚಿಮವಾಹಿನಿ ಯೋಜನೆಯಲ್ಲಿ ಕೆಲವಾರು ನದಿಗಳಿಗೆ ಅಣೆಕಟ್ಟು ಮಾಡುವ ಕಾರ್ಯಕ್ರಮ ಅತೀ ಶೀಘ್ರದಲ್ಲಿ ನಡೆಯಲಿದೆ. ಅಜಿಲಮೊಗರು ಕಡೇಶ್ವಾಲ್ಯ ಸಂಪರ್ಕ ಸೌಹಾರ್ದ ಸೇತುವೆಗೆ ೩೧ ಕೋಟಿ ಮಂಜೂರಾಗಿದ್ದು ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದು ಹೇಳಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್, ಪಾಣೆಮಂಗಳೂರು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಶೆಣೈ, ಪುರಸಭಾ ಸದಸ್ಯೆ ಪ್ರಭಾ ಸಾಲ್ಯಾನ್, ಪ್ರಮುಖರಾದ ಜೋಸ್ಪಿನ್ ಡಿಸೋಜ, ಉಮರ್ ಪಜೀರ್, ಜನಾರ್ಧನ್ ಶೆಟ್ಟಿ ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷ ಲೋಲಾಕ್ಷ ಶೆಟ್ಟಿ ಸ್ವಾಗತಿಸಿದರು. ಬೂಡಾ ಅಧ್ಯಕ್ಷ ಸದಾಶಿವ ಬಂಗೇರಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…