ಸರ್ವಕಾಲಿಕವಾದ ಸರ್ವಜ್ಞನ ಚಿಂತನೆ ಎಲ್ಲಾ ಸಮಾಜದ ಕಲ್ಯಾಣದ ಉದ್ದೇಶ ಹೊಂದಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಂಗಳವಾರ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಶ್ರೀ ಸರ್ವಜ್ಞ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ವಜ್ಞ ಸಾಹಿತ್ಯ ಪ್ರಕಾರವನ್ನು ಉಳಿಸುವ ಶಾಶ್ವತ ಯೋಜನೆ ನಡೆಯಬೇಕೆಂದು ಹಾರೈಸಿದರು. ಬಂಟ್ವಾಳ ತಾಲೂಕು ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ಟಿ ಶೇಷಪ್ಪ ಮಾಸ್ಟರ್, ಬಂಟ್ವಾಳ ಕುಲಾಲ ಯುವ ವೇದಿಕೆ ಅಧ್ಯಕ್ಷ ನಾರಾಯಣ ಸಿ ಪೆರ್ನೆ , ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಸತೀಶ ಕುಲಾಲ, ಬಂಟ್ವಾಳ ತಾಲೂಕು ಯುವ ವಾಹಿನಿ ಅಧ್ಯಕ್ಷ ಸತೀಶ್ ಕುಮಾರ್, ಬಾಕುಡ ಸಮಾಜದ ಗೌರವಾಧ್ಯಕ್ಷ ಪದ್ಮನಾಭ ನರಿಂಗಾನ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಉಪತಹಶೀಲ್ದಾರ್ ವಾಸು ಶೆಟ್ಟಿ. ಚುನಾವಣಾ ಉಪತಹಶೀಲ್ದಾರ್ ರಾಜೇಶ್ ನಾಯ್ಕ್. ಉಪತಹಶೀಲ್ದಾರ್ ಸೀತಾರಾಮ. ಗ್ರೆಟ್ಟಾ ಮಸ್ಕರೇಂಙಸ್. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ವಂದಿಸಿದರು.