www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ ಬಾರ್ ಎಸೋಸಿಯೇಶನ್, ಲಯನ್ಸ್ ಕ್ಲಬ್ ವತಿಯಿಂದ ಬಂಟ್ವಾಳ ಕೋರ್ಟ್ ಆವರಣದಲ್ಲಿ ಫೆ.26ರಂದು ಮಧ್ಯಾಹ್ನ 3ರಿಂದ ರಿಯಲ್ ಎಸ್ಟೇಟ್ ಆಕ್ಟ್ ಕುರಿತ ವಕೀಲರ ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಲಿದೆ.
ಕಾರ್ಯಕ್ರಮವನ್ನು ಬಂಟ್ವಾಳದ ಹಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧೀಶ ಯು.ಚಂದ್ರಶೇಖರ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್., ಲಯನ್ಸ್ ಜಿಲ್ಲೆಯ ಕಾರ್ಯದರ್ಶಿ ವಸಂತ್ ಕುಮಾರ್ ಶೆಟ್ಟಿ ಭಾಗವಹಿಸುವರು. ಅಧ್ಯಕ್ಷತೆಯಲ್ಲಿ ಬಂಟ್ವಾಳ ಬಾರ್ ಎಸೋಸಿಯೇಶನ್ ಅಧ್ಯಕ್ಷ ಬಿ.ವೆಂಕಟರಮಣ ಶೆಣೈ ವಹಿಸುವರು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ನ್ಯಾಯವಾದಿ ವಿವೇಕಾನಂದ ಪನೆಯಾಲ, ಅತಿಥಿಗಳಾಗಿ ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಸಬಿತಾ ಶೆಟ್ಟಿ ಮತ್ತು ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಕೆ. ಯಡಪಡಿತ್ತಾಯ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)